ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ ಕೊನೆಯ ಹಾಗೂ 5ನೇ ಪಂದ್ಯದಲ್ಲಿ ಸೋಲನ್ನನುಭವಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವಲ್ಲಿ ಟೀಂ ಇಂಡಿಯಾ ವಿಫಲವಾಗಿದೆ.
ಈ ಸರಣಿಯ ಐತಿಹಾಸಿಕ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಿದೆ. ಜೂನ್ ತಿಂಗಳಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುವ ಫೈನಲ್‌ನಲ್ಲಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.
ಪಾಯಿಂಟ್ ಪರ್ಸೆಂಟೇಜ್‌ನಲ್ಲಿ ದಕ್ಷಿಣ ಆಫ್ರಿಕಾ (66.67) ಹಾಗೂ ಆಸ್ಟ್ರೇಲಿಯಾ (63.73) ನ್ನು ಪಡೆಯುವ ಮೂಲಕ ಫೈನಲ್ ಪ್ರವೇಶಿಸಿದರೆ, ಭಾರತ ತಂಡವು ಈ ಸರಣಿ ಸೋಲುವ ಮೂಲಕ (50)ಕ್ಕೆ ಕುಸಿದಿದೆ.
ಭಾರತ ತಂಡಕ್ಕೆ ಈ ಆವೃತ್ತಿಯಲ್ಲಿ ಯಾವುದೇ ಟೆಸ್ಟ್ ಪಂದ್ಯಗಳು ಇಲ್ಲದೇ ಇರುವುದರಿಂದ ಫೈನಲ್‌ನಿಂದ ಹೊರಬಿದ್ದಿದೆ.
ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲನ್ನನುಭವಿಸಿದೆ. ಆ ಮೂಲಕ 5 ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಆಸ್ಟ್ರೇಲಿಯಾ ಗೆದ್ದು ಕೊಂಡಿದೆ.