ದುಬೈ: ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದ್ದು, ಆ ಪಿಚ್‌ನಲ್ಲಿ ಹೇಗೆ ಆಡಬೇಕೆಂದು ತಂಡಕ್ಕೆ ಸ್ಪಷ್ಟತೆ ಇದೆ ಎಂದು ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಹೇಳಿದ್ದಾರೆ.
ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಢ್ ತಂಡಗಳು ಸೆಣಸಲಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇನ್, ಭಾರತಕ್ಕೆ ಒಂದೇ ಕ್ರೀಡಾಂಗಣದಲ್ಲಿಆಡುವ ಅನುಕೂಲತೆ ಇದ್ದು, ಇದರಿಂದ ಪಂದ್ಯದ ನಂತರ ಸಾಕಷ್ಟು ವಿಶ್ರಾಂತಿ ಮತ್ತು ಅದೇ ಮೈದಾನದಲ್ಲಿ ಪೂರ್ವ ಸಿದ್ದತೆಗೆ ಅವಕಾಶ ಇರುತ್ತದೆ.
ನಾವು ಈ ಕುರಿತು ಹೆಚ್ಚು ಚಿಂತಿತರಾಗಿಲ್ಲ. ದುಬೈ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡಲಿದೆ. ಅದನ್ನು ಪರಿಗಣಿಸಿ ಧನಾತ್ಮಕ ಅಂಶಗಳೊಂದಿಗೆ ಫೈನಲ್‌ಗಾಗಿ ಸಿದ್ದತೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ದುಬೈ ಪಿಚ್‌ನಲ್ಲಿ ಒಂದು ಪಂದ್ಯ ಆಡಿರುವುದರಿಂದ ಪಿಚ್‌ಗೆ ಹೊಂದಿಕೊಳ್ಳಲು ನೆರವಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…