ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್‌ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್‌ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ ಗೆಲ್ಲುಚ ನೆಚ್ಚಿನ ತಂಡ ಎಂಬ ನರೀಕ್ಷೆ ಹುಟ್ಟುಹಾಕಿದ್ದರು.
ಆದರೆ ಜರ್ಮನ್ ವಿರುದ್ಧ ಸೋತು ಕಂಚಿನ ಪದಕಕ್ಕಾಗಿ ಸ್ಪೇನ್ ವಿರುದ್ಧ ಕಣಕ್ಕಿಳಿಯಬೇಕಾಯಿತು. ಇನ್ನು ಇಂದು (ಗುರುವಾರ, ಆ.8)ನಡೆದ ಭಾರತ ಹಾಗೂ ಸ್ಪೇನ್ ನಡುವಿನ ಕಂಚಿನ ಪದಕ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಗೆಲುವು ದಾಖಲಿಸುವ ಮೂಲಕ ಮತ್ತೊಮ್ಮೆ ಕಂಚಿಗೆ ಕೊರಳೊಡ್ಡಿದೆ.
ಪಂದ್ಯದ ಆರಂಭದಿಂದಲೂ ತಮ್ಮ ಹಿಡಿತದಲ್ಲಿಯೇ ಮುನ್ನಡೆ ಸಾಧಿಸುತ್ತಿದ್ದ ಭಾರತ ತಂಡ ಸ್ಪೇನ್ ಕಟ್ಟಿಹಾಕುವಲ್ಲಿ ಸಫಲವಾಯಿತು. ಭಾರತ ತಂಡದ ಪರವಾಗಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರು ಎರಡು ಗೋಲು ಗಳಿಸಿದರು. ಇನ್ನು ಸ್ಪೇನ್ ಒಡ್ಡಿದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡದ ಗೋಲ್ ಕೀಪರ್ ಶ್ರೀಜೇಶ್ ಅವರು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…