ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳಿಧರನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿದೆ.
2011ರಲ್ಲಿ ಶ್ರೀಲಂಕಾ, ಬಾಂಗ್ಲಾದೇಶದ ಜೊತೆ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿತ್ತು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮುತ್ತಯ್ಯ ಮುರಳಿಧರನ್ ಕೂಡ ಆಡಿದ್ದರು. ಅತ್ಯುತ್ತಮ ಪ್ರದರ್ಶನ ತೋರಿದ್ದ ಟೀಮ್ ಇಂಡಿಯಾ ಫೈನಲ್ ಗೆದ್ದು ಎರಡನೇ ವಿಶ್ವಕಪ್ ಮುಡಿಗೇರಿಸಿಕೊಂಡಿತ್ತು.
ಇತ್ತೀಚೆಗೆ ಸ್ಟಾರ್ ಸ್ಪೋರ್ಟ್ಸ್ ಜತೆ ಮಾತನಾಡಿದ್ದ ಮುತ್ತಯ್ಯ ಮುರಳಿಧರನ್, “2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ vs ಇಂಗ್ಲೆಂಡ್ ತಂಡಗಳನ್ನು ನೋಡಲು ಎದುರು ನೋಡುತ್ತಿದ್ದೇನೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ನೆಚ್ಚಿನ ತಂಡವಾಗಿದೆ. ಏಕೆಂದರೆ ತವರಿನಲ್ಲಿ ಹೇಗೆ ಗೆಲ್ಲಬೇಕೆಂದು ಭಾರತ ತಂಡಕ್ಕೆ ಚೆನ್ನಾಗಿ ಗೊತ್ತಿದೆ. ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟರೆ ಪಂದ್ಯ ತುಂಬಾ ಆಸಕ್ತಿಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.
ಏಷ್ಯಾ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಲಿವೆ: ಸೆಹ್ವಾಗ್ ಭಾರತದ ಕಂಡೀಷನ್ಸ್ ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಏಷ್ಯಾ ತಂಡಗಳಿಗೆ ನೆರವಾಗಲಿದೆ. ಏಕೆಂದರೆ ಇಲ್ಲಿ ಸ್ಪಿನ್ ಸ್ನೇಹಿ ವಿಕೆಟ್ ಇರುವ ಕಾರಣ ಅತ್ಯುತ್ತಮ ಸ್ಪಿನ್ನರ್‌ಗಳನ್ನು ಹೊಂದಿರುವ ತಂಡಗಳು ಮೇಲುಗೈ ಸಾಧಿಸಲಿವೆ. ಈ ನಿಟ್ಟಿನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮೇಲುಗೈ ಸಾಧಿಸಬಹುದು. ಆದರೆ, ಅಫಘಾನಿಸ್ತಾನ ತಂಡದಲ್ಲಿ ಉತ್ತಮ ಸ್ಪಿನ್ನರ್‌ಗಳಿದ್ದರೂ ಬ್ಯಾಟಿಂಗ್ ಸಮಸ್ಯೆಯಿಂದ ಆಫ್ಘನ್ ಮುನ್ನಡೆ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಉಪ ಖಂಡಗಳ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಬಹುದು. ಭಾರತ ಹಾಗೂ ಶ್ರೀಲಂಕಾ ತಂಡಗಳಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. ಅಫಘಾನಿಸ್ತಾನ ತಂಡದಲ್ಲಿ ಬ್ಯಾಟಿಂಗ್ ಲೈನ್ ಅಪ್ ಇಲ್ಲವೇ ಇಲ್ಲ, ಆದರೆ ಈ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. 2011ರಲ್ಲಿ ಎರಡು ಉತ್ತಮ ತಂಡಗಳು ಫೈನಲ್ ತಲುಪಿದ್ದವು ಹಾಗೂ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ತಂಡ ಗೆಲುವು ಸಾಧಿಸಿತ್ತು,” ಎಂದು ಇದೇ ವೇಳೆ ಉಪಸ್ಥಿತರಿದ್ದ ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.
ಭಾರತ ತಂಡಕ್ಕೆ ಆಸ್ಟ್ರೇಲಿಯಾ ಮೊದಲ ಎದುರಾಳಿ : 2023ರ ಏಕದಿನ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಜೂನ್ 27 ರಂದು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತಂಡ ಅಕ್ಟೋಬರ್ 8 ರಂದು ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲನೇ ಪಂದ್ಯದಲ್ಲಿ ಸೆಣಸಲಿದೆ. ನಂತರ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಟ ನಡೆಸಲಿದೆ.
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…