ಕ್ರೀಡೆ

‘2023ರ ಏಕದಿನ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡ ಭಾರತ’: ಮುತ್ತಯ್ಯ ಮರಳಿಧರನ್!

ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್‌ ಮುತ್ತಯ್ಯ ಮುರಳಿಧರನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿದೆ.

2011ರಲ್ಲಿ ಶ್ರೀಲಂಕಾ, ಬಾಂಗ್ಲಾದೇಶದ ಜೊತೆ ಭಾರತ ತಂಡ ಏಕದಿನ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿತ್ತು. ಈ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮುತ್ತಯ್ಯ ಮುರಳಿಧರನ್‌ ಕೂಡ ಆಡಿದ್ದರು. ಅತ್ಯುತ್ತಮ ಪ್ರದರ್ಶನ ತೋರಿದ್ದ ಟೀಮ್‌ ಇಂಡಿಯಾ ಫೈನಲ್‌ ಗೆದ್ದು ಎರಡನೇ ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

ಇತ್ತೀಚೆಗೆ ಸ್ಟಾರ್‌ ಸ್ಪೋರ್ಟ್ಸ್‌ ಜತೆ ಮಾತನಾಡಿದ್ದ ಮುತ್ತಯ್ಯ ಮುರಳಿಧರನ್‌, “2023ರ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ vs ಇಂಗ್ಲೆಂಡ್‌ ತಂಡಗಳನ್ನು ನೋಡಲು ಎದುರು ನೋಡುತ್ತಿದ್ದೇನೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ನೆಚ್ಚಿನ ತಂಡವಾಗಿದೆ. ಏಕೆಂದರೆ ತವರಿನಲ್ಲಿ ಹೇಗೆ ಗೆಲ್ಲಬೇಕೆಂದು ಭಾರತ ತಂಡಕ್ಕೆ ಚೆನ್ನಾಗಿ ಗೊತ್ತಿದೆ. ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟರೆ ಪಂದ್ಯ ತುಂಬಾ ಆಸಕ್ತಿಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.

ಏಷ್ಯಾ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಲಿವೆ: ಸೆಹ್ವಾಗ್‌ ಭಾರತದ ಕಂಡೀಷನ್ಸ್‌ ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಏಷ್ಯಾ ತಂಡಗಳಿಗೆ ನೆರವಾಗಲಿದೆ. ಏಕೆಂದರೆ ಇಲ್ಲಿ ಸ್ಪಿನ್‌ ಸ್ನೇಹಿ ವಿಕೆಟ್‌ ಇರುವ ಕಾರಣ ಅತ್ಯುತ್ತಮ ಸ್ಪಿನ್ನರ್‌ಗಳನ್ನು ಹೊಂದಿರುವ ತಂಡಗಳು ಮೇಲುಗೈ ಸಾಧಿಸಲಿವೆ. ಈ ನಿಟ್ಟಿನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮೇಲುಗೈ ಸಾಧಿಸಬಹುದು. ಆದರೆ, ಅಫಘಾನಿಸ್ತಾನ ತಂಡದಲ್ಲಿ ಉತ್ತಮ ಸ್ಪಿನ್ನರ್‌ಗಳಿದ್ದರೂ ಬ್ಯಾಟಿಂಗ್ ಸಮಸ್ಯೆಯಿಂದ ಆಫ್ಘನ್ ಮುನ್ನಡೆ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಉಪ ಖಂಡಗಳ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಬಹುದು. ಭಾರತ ಹಾಗೂ ಶ್ರೀಲಂಕಾ ತಂಡಗಳಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. ಅಫಘಾನಿಸ್ತಾನ ತಂಡದಲ್ಲಿ ಬ್ಯಾಟಿಂಗ್‌ ಲೈನ್‌ ಅಪ್‌ ಇಲ್ಲವೇ ಇಲ್ಲ, ಆದರೆ ಈ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. 2011ರಲ್ಲಿ ಎರಡು ಉತ್ತಮ ತಂಡಗಳು ಫೈನಲ್‌ ತಲುಪಿದ್ದವು ಹಾಗೂ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ತಂಡ ಗೆಲುವು ಸಾಧಿಸಿತ್ತು,” ಎಂದು ಇದೇ ವೇಳೆ ಉಪಸ್ಥಿತರಿದ್ದ ವೀರೇಂದ್ರ ಸೆಹ್ವಾಗ್‌ ತಿಳಿಸಿದ್ದಾರೆ.

ಭಾರತ ತಂಡಕ್ಕೆ ಆಸ್ಟ್ರೇಲಿಯಾ ಮೊದಲ ಎದುರಾಳಿ : 2023ರ ಏಕದಿನ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಜೂನ್‌ 27 ರಂದು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತಂಡ ಅಕ್ಟೋಬರ್‌ 8 ರಂದು ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲನೇ ಪಂದ್ಯದಲ್ಲಿ ಸೆಣಸಲಿದೆ. ನಂತರ ಅಕ್ಟೋಬರ್‌ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಟ ನಡೆಸಲಿದೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago