ಹೊಸದಿಲ್ಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-೨೦ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಸೆಮಿಫೈನಲ್ ಹಾದಿ ಕಠಿಣವೆನಿಸಿದೆ.
ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ.
ಭಾರತ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರಲಿದೆ.
ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ಪಾಕಿಸ್ತಾನ ಮೂಲದ ನಟಿ ಸೆಹರ್ ಶಿನ್ವಾರಿ, ಭಾರತ ವಿರುದ್ಧ ಜಿಂಬಾಬ್ವೆ ಗೆದ್ದರೆ ಆ ದೇಶದ ಯುವಕನನ್ನು ಮದುವೆಯಾಗುವುದಾಗಿ ಹೇಳಿದ್ದಾರೆ.





