ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲುವ ಮೂಲಕ 10 ವರ್ಷದ ಬಳಿಕ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ.
BGT ಟ್ರೋಫಿಯ 5ನೇ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ಭಾರತ 162 ರನ್‌ಗಳ ಗುರಿ ನೀಡಿತು. ಆಸ್ಟ್ರೇಲಿಯಾ ತಂಡ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 3-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಎರಡನೇ ದಿನದಾಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್‌ಗಳಿಸಿದ್ದ ಭಾರತ ಮೂರನೇ ದಿನದಲ್ಲಿ ಕೇವಲ 16 ರನ್ ಸೇರಿಸಿ ಆಲೌಟ್ ಆಗುವ ಮೂಲಕ ಆಸ್ಟ್ರೇಲಿಯಾಗೆ 162 ರನ್‌ಗಳ ಗುರಿ ನೀಡಿತು.
ಈ ಗುರಿ ಬೆನ್ನಟ್ಟಿದ ಆಸೀಸ್‌ನ ಬ್ಯಾಟರ್‌ಗಳು ಆರಂಭದಲ್ಲಿ ಸುಲಭ ಗೆಲುವ ದಾಖಲಿಸುವ ಮುನ್ಸೂಚನೆ ನೀಡಿದರು. ಆದರೆ ಇಂಡಿಯಾದ ಬೌಲರ್ ಪ್ರಸಿದ್ಧ ಕೃಷ್ಣ, ಆಸ್ಟ್ರೇಲಿಯಾ ಬ್ಯಾಟರ್‌ಗಳನ್ನು ಪೆವಿಲಿಯನ್ ಹಾದಿ ಹಿಡಿಸುವ ಮೂಲಕ ಸ್ವಲ್ಪ ಮಟ್ಟಿಗೆ ಬಿಗಿ ಹಿಡಿತ ಸಾಧಿಸಿದರು.
ಆದರೆ ಕೊನೆಯಲ್ಲಿ ಟ್ರಾವಿಸ್ ಹೆಡ್ 34(38) ಹಾಗೂ ವೆಬ್‌ಸ್ಟರ್ 39(34) ರನ್ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ 10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧ ಈ ಹಿಂದಿನ 4 ಸರಣಿಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ತವರಿನಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ತಲಾ ಎರಡು ಸರಣಿಗಳಲ್ಲಿ ಭಾರತ ಗೆದ್ದಿತ್ತು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…