ಕ್ರೀಡೆ

ನ್ಯೂಜಿಲೆಂಡ್‌ ವಿರುದ್ಧ ಏಕದಿನ ಸರಣಿ ಸೋತ ಭಾರತ

ಮೂರನೇ ಪಂದ್ಯಕ್ಕೂ ಮಳೆ ಅಡ್ಡಿ, 1-0 ಅಂತರದಿಂದ ಸರಣಿ ಗೆದ್ದ ಕಾಂಗರೂಗಳು

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ 3ನೇ ಹಾಗೂ ಕೊನೆಯ ಏಕದಿನ ಪಂದ್ಯ ಮಳೆಗೆ ಆಹುತಿಯಾಗಿದೆ. ಈ ಮೂಲಕ ಕಿವೀಸ್ ಪಡೆ ಏಕದಿನ ಸರಣಿಯನ್ನು 1-0 ಅಂತರದಿಂದ ತಮ್ಮದಾಗಿಸಿಕೊಂಡಿದೆ. ಈ ಸರಣಿಗೂ ಮುನ್ನ ನಡೆದ ಟಿ20 ಸರಣಿಯನ್ನು ನ್ಯೂಜಿಲೆಂಡ್ ತಂಡ ಕಳೆದುಕೊಂಡಿತ್ತು. ಆದರೆ ಏಕದಿನ ಸರಣಿಯಲ್ಲಿ ಸಿಕ್ಕ ಮೊದಲ ಗೆಲುವು ಕೇನ್ ಪಡೆಯನ್ನು ಸರಣಿ ಗೆಲ್ಲುವಂತೆ ಮಾಡಿತು. 3ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾದ ಸೋಲು ಖಚಿತವಾಗಿತ್ತು. ಆದರೆ ಈ ಪಂದ್ಯಕ್ಕೆ ಅಡ್ಡಿಪಡಿಸಿದ ವರುಣ ಧವನ್ ಪಡೆಯ ಸರಣಿ ಸೋಲಿನ ತೀವ್ರತೆಯನ್ನು ಕೊಂಚ ಕಡಿತಗೊಳಿಸಿದ. ಈ ಪಂದ್ಯದಲ್ಲಿ ಮೊದಲಯ ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 219 ರನ್​ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆ ನೀರು ಕುಡಿದಷ್ಟು ಸುಲಭವಾಗಿ ಟಾರ್ಗೆಟ್ ಬೆನ್ನಟ್ಟಿತ್ತು. ಆದರೆ ಕಿವೀಸ್ ಇನ್ನಿಂಗ್ಸ್​ನ 18ನೇ ಓವರ್​ನಲ್ಲಿ ಎಂಟ್ರಿಕೊಟ್ಟ ವರುಣ ಪಂದ್ಯವನ್ನು ನಿಲ್ಲಿಸುವಲ್ಲಿ ಯಶಸ್ವಿಯಾದ.

ಈ ಸರಣಿಯುದ್ದಕ್ಕೂ ಟಾಸ್ ಗೆಲ್ಲುವಲ್ಲಿ ವಿಫಲರಾದ ನಾಯಕ ಧವನ್ ಕೊನೆಯ ಪಂದ್ಯದಲ್ಲೂ ಟಾಸ್ ಸೋತರು. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎಂದಿನಂತೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತರು ಉತ್ತಮ ಆರಂಭ ಮಾಡಿದ್ದ ಟೀಂ ಇಂಡಿಯಾ ಪಂದ್ಯದಲ್ಲಿ ಎಡವಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ಗಿಲ್ ಹಾಗೂ ಧವನ್ ರನ್ ಗಳಿಸಲು ಪರದಾಡಿದರು. ಅದರಲ್ಲೂ ಉತ್ತಮ ಫಾರ್ಮ್​ನಲ್ಲಿದ್ದ ಗಿಲ್​ಗೆ ಮೊದಲ 6 ಓವರ್​ಗಳಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿದ ಭಾರತ ಒಂದರ ಹಿಂದೆ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಈ ಪಂದ್ಯದಲ್ಲಿ ಬರೋಬ್ಬರಿ 22 ಎಸೆತಗಳನ್ನು ಎದುರಿಸಿದ ಗಿಲ್ ಕೇವಲ 13 ರನ್ ಗಳಿಸಲಷ್ಟೇ ಶಕ್ತರಾದರು. ಗಿಲ್ ವಿಕೆಟ್ ಬಳಿಕ ನಾಯಕ ಧವನ್ ಕೂಡ ಕ್ರೀಸ್​ನಲ್ಲಿ ನಿಂತಿದ್ದು ಸಾಕೆನಿಸಿ 45 ಎಸೆತಗಳಲ್ಲಿ 28 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ಏಕದಿನ ಸರಣಿಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಅಯ್ಯರ್ ಮಾತ್ರ ಈ ಪಂದ್ಯದಲ್ಲೂ ತಮ್ಮ ಎಂದಿನ ಆಟವನ್ನು ಮುಂದುವರೆಸಿದರು. ಪಂತ್ ಜೊತೆಗೂಡಿ ನಿದಾನವಾಗಿ ಟೀಂ ಇಂಡಿಯಾ ಇನ್ನಿಂಗ್ಸ್ ಕಟ್ಟಿದರು. ಆದರೆ ಸತತ ಅವಕಾಶಗಳ ಹೊರತಾಗಿಯೂ ಉಪನಾಯಕ ಪಂತ್ ರನ್ ಗಳಿಸುವಲ್ಲಿ ಎಡವಿದರು. ಈ ಸರಣಿಯುದ್ದಕ್ಕೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಪಂತ್ ಈ ಪಂದ್ಯದಲ್ಲೂ ಕೇವಲ 10 ರನ್​ಗಳಿಗೆ ಸುಸ್ತಾದರು. ಆ ಬಳಿಕ ಬಂದ ಸೂರ್ಯಕುಮಾರ್ ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಅಯ್ಯರ್ ಕೂಡ ಅರ್ಧಶತಕದಂಚಿನಲ್ಲಿ ಎಡವಿ 49 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಮೊದಲ ಏಕದಿನ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ವಾಷಿಂಗ್ಟನ್ ಸುಂದರ್, ಈ ಪಂದ್ಯದಲ್ಲೂ ಸಮಯೋಜಿನ ಇನ್ನಿಂಗ್ಸ್ ಆಡಿದರು. ಒಂದೆಡೆ ವಿಕೆಟ್ ಉರುಳುತ್ತಿದ್ದರು ಬಾಲಗೊಂಚಿಗಳ ಜೊತೆಗೂಡಿ ಅದ್ಭುತ ಅರ್ಧಶತಕ ಸಿಡಿಸಿ ಮಿಂಚಿದರು. ತಂಡದ ಪರ ಸುಂದರ್ ಹಾಗೂ ಶ್ರೇಯಸ್ ಬಿಟ್ಟರೆ ಮತ್ತ್ಯಾವ ಆಟಗಾರನು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಅಂತಿಮವಾಗಿ ಟೀಂ ಇಂಡಿಯಾ ತನ್ನೇಲ್ಲ ವಿಕೆಟ್ ಕಳೆದುಕೊಂಡು 219 ರನ್ ಗಳಿಸಲಷ್ಟೇ ಶಕ್ತವಾಯಿತು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

5 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

33 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago