ಕ್ರೀಡೆ

Paris Olympics 2024: ಹಾಕಿಯಲ್ಲಿ ಮುಗ್ಗರಿಸಿದ ಭಾರತ; ಫೈನಲ್ಸ್‌ಗೆ ಲಗ್ಗೆಯಿಟ್ಟ ಜರ್ಮನ್‌

ಪ್ಯಾರಿಸ್‌: ಭಾರತ ಹಾಕಿ ತಂಡ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಫೈನಲ್ಸ್‌ ತಲುಪುವ ಭಾರತದ ಕನಸು ನುಚ್ಚು ನೂರಾಗಿದೆ. ಜರ್ಮನ್‌ ವಿರುದ್ಧ ರೋಚಕ ಹಣಾಹಣೆಯಲ್ಲಿ ಸೋತ ಭಾರತ ತಂಡ ಚಿನ್ನ ಗೆಲ್ಲುವ ಕನಸು ಕನಸಾಗೇ ಉಳಿದಿದೆ. ಭಾರತ ತಂಡದ ವಿರುದ್ಧ ಗೆದ್ದ ಜರ್ಮನಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದೆ.

ಇಂದು (ಮಂಗಳವಾರ) ನಡೆದ ಸೆಮಿ ಫೈನಲ್ಸ್‌ ಪಂದ್ಯದಲ್ಲಿ ಜರ್ಮನಿ ತಂಡವನ್ನು ದಿಟ್ಟ ತನದಿಂದ ಎದುರಿಸುವಲ್ಲಿ ವಿಫಲವಾದ ಭಾರತ ತಂಡ ಗೆಲ್ಲುವ ಅವಕಾಶ ಕೈಚೆಲ್ಲಿತು.

ಪಂದ್ಯ ಆರಂಭದ ವೇಳೆಯಲ್ಲಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ 7ನೇ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ತಂದು ಕೊಟ್ಟರು. ಇತ್ತ ಎದುರಾಳಿ ಜರ್ಮನ್‌ಗೆ ಸಿಕ್ಕ ಎರಡು ಪೆನಾಲ್ಟಿ ಅವಕಾಶವನ್ನು ಬಳಸಿಕೊಂಡು ಎರಡು ಗೋಲುಗಳನ್ನು ಗಳಿಸಿದರು. ಮೊದಲ ವಿರಾಮದ ಅಂತ್ಯಕ್ಕೆ ಜರ್ಮನಿ 2 ಹಾಗೂ ಭಾರತ 1 ಗೋಲು ಗಳಿಸಿ ಹಿನ್ನಡೆ ಅನುಭವಿಸತ್ತು.

ಮೊದಲಾರ್ಧದ ಬಳಿಕ ಪುಟಿದೆದ್ದ ಭಾರತ ತಂಡ ಎದುರಾಳಿಗೆ ತಕ್ಕ ಉತ್ತರ ನೀಡಿದರು. 36 ನೇ ನಿಮಿಷದಲ್ಲಿ ಗೋಲು ಬಾರಿಸಿದ ಸುಖ್‌ಜೀತ್‌ ಸಿಂಗ್‌ ತಂಡಕ್ಕೆ ಆಸರೆಯಾದರು.

ಉಳಿದ ಮೂವತ್ತು ನಿಮಿಷಗಳ ಕಾಲ ಒಂದೇ ಒಂದು ಗೋಲು ಗಳಿಸಲು ಇತ್ತಂಡಗಳು ಪರದಾಡಿದರು. ಜರ್ಮನ್‌ಗೆ ಎರಡು ಬಾರಿ ಅವಕಾಶ ಸಿಕ್ಕರೂ ಗೋಲು ಗಳಿಸುವಲ್ಲಿ ವಿಫಲರಾದರು. ಆದರೆ ಕೊನೆಯ 6 ನಿಮಿಷಗಳು ಬಾಕಿ ಇರುವಾಗ ಜರ್ಮನಿಯ ಮಾರ್ಕೊ 54ನೇ ನಿಮಿಷದಲ್ಲಿ ರೋಚಕ ಗೋಲು ಗಳಿಸಿ ಜರ್ಮನಿಗೆ ಮುನ್ನಡೆ ತಂದುಕೊಡುವ ಮೂಲಕ ಜರ್ಮನಿ ತಂಡ ಫೈನಲ್ಸ್‌ ತಲುಪಲು ಸಹಕರಿಸಿದರು.

ಕೊನೆವರೆಗೂ ರೋಚಕವಾಗಿ ಹೋರಾಟ ಮಾಡಿದ ಭಾರತ ತಂಡ ಫೈನಲ್ಸ್‌ ತಲುಪುವಲ್ಲಿ ವಿಫಲವಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago