Mysore
21
overcast clouds
Light
Dark

ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿಯ ಅಗತ್ಯವಿದೆ: ಚೇತನ್‌ ಅಹಿಂಸಾ

ಬೆಂಗಳೂರು : ಆಗಾಗ್ಗೆ ತಮ್ಮ ಸೈದ್ದಾಂತಿಕ, ಸಾಮಾಜಿಕ ಹೇಳಿಕೆಗಳಿಂದ ಸುದ್ದಿ ಹಾಗೂ ವಿವಾದಕ್ಕೊಳಗಾಗುವ ನಟ ಚೇತನ್ ಅಹಿಂಸಾ ಇದೀಗ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಮಾತನಾಡಿದ್ದು, ಇದೀಗ ಭಾರೀ ವೈರಲ್‌ ಆಗಿದ್ದು, ಪರ ವಿರೋಧ ಚರ್ಚೆಗಳಾಗುತ್ತಿವೆ.

ಭಾರತೀಯ ಕ್ರಿಕೆಟ್ ನಲ್ಲಿ ಮೀಸಲಾತಿ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಚೇತನ್, ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು ಎಂದಿದ್ದಾರೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ  ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ೬ ವಿಕೆಟ್ ಗಳ ಹೀನಾಯ ಸೋಲು ಕಂಡಿತ್ತು. ಆಸೀಸ್‌  6ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರಿತು.

ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿರಾಟ್‌ ಕೊಹ್ಲಿ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದರು. ಶಮಿ ಅತಿ ಹೆಚ್ಚು ವಿಕೆಟ್‌ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ