ಕ್ರೀಡೆ

ಇದೇ ಭಾನುವಾರ ಭಾರತ-ಪಾಕ್‌ ಮತ್ತೆ ಮುಖಾಮುಖಿ : ಕಾತುರದಿಂದ ಎದುರು ನೋಡುತ್ತಿರುವ ಅಭಿಮಾನಿಗಳು

ಏಷ್ಯಾಕಪ್: ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್​ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್​ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.

ಇನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್​- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಒಂದು ವೇಳೆ ಹಾಂಗ್​ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.

ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್​ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.

 

andolana

Recent Posts

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

9 mins ago

ವಿವಾದದ ನಡುವೆಯೂ ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳದನಲ್ಲಿ ಬಾಡೂಟ ವಿತರಣೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…

20 mins ago

ಕುವೈತ್‌ ಪ್ರವಾಸ: ಪ್ರಧಾನಿ ಮೋದಿಗೆ 20ನೇ ಅಂತರಾಷ್ಟ್ರೀಯ ಗೌರವ

ಕುವೈತ್‌/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್‌ ಮಿಶಾಲ್‌ ಅಲ್‌…

36 mins ago

ಮೈಸೂರಿನಲ್ಲಿ ನಿಮ್ಹಾನ್ಸ್‌ ಘಟಕ ಸ್ಥಾಪನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…

40 mins ago

ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಪ್ರಹ್ಲಾದ್‌ ಜೋಶಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೀಡಿರುವ ಹೇಳಿಕೆ ಅಮಿತ್‌…

1 hour ago

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

2 hours ago