ಕ್ರೀಡೆ

ಭಾರತ – ಪಾಕ್ ಆಟಗಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಕು : ಕ್ರಿಸ್ ಗೇಲ್ ಅಚ್ಚರಿ ಹೇಳಿಕೆ

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

lokesh

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago