Mysore
25
clear sky

Social Media

ಭಾನುವಾರ, 19 ಏಪ್ರಿಲ 2026
Light
Dark

ಭಾರೀ ವಿರೋಧದ ಮಧ್ಯೆ ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ

ಏಷ್ಯಾ ಕಪ್‌ ಟಿ-20 ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.

ಭಾರತ-ಪಾಕ್‌ ಪಂದ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರರ ದಾಳಿ ಮರೆಯುವ ಮೊದಲೇ ಪಾಕಿಸ್ತಾನದೊಂದಿಗೆ ಪಂದ್ಯವನ್ನು ಆಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇನ್ನು ಭಾರೀ ವಿರೋಧ ವ್ಯಕ್ತವಾದ ಪರಿಣಾಮ ಈ ಪಂದ್ಯದ ಟಿಕೆಟ್‌ಗೆ ಬೇಡಿಕೆ ಕುಸಿತವಾಗಿದೆ.

ಕಳೆದ ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಭೀಕರ ದಾಳಿಯ ನಂತರ ಪಾಕಿಸ್ತಾನ ವಿರುದ್ಧ ಎಲ್ಲಾ ರೀತಿಯ ಸಂಬಂಧ ಕಳೆದುಕೊಳ್ಳಲು ವ್ಯಾಪಕ ಒತ್ತಾಯ ಕೇಳಿಬಂದಿತ್ತು. ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ಪಾಕಿಸ್ತಾನ ವಿರುದ್ಧ ಆಡಲು ಭಾರತ ಸಜ್ಜಾಗಿದೆ. ಇಂದು ರಾತ್ರಿ ಎಂಟು ಗಂಟೆಗೆ ಪಂದ್ಯ ಆರಂಭವಾಗಲಿದ್ದು, ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

Tags:
error: Content is protected !!