ಏಷ್ಯಾ ಕಪ್ ಟಿ-20 ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಪಹಲ್ಗಾಮ್ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.
ಭಾರತ-ಪಾಕ್ ಪಂದ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರರ ದಾಳಿ ಮರೆಯುವ ಮೊದಲೇ ಪಾಕಿಸ್ತಾನದೊಂದಿಗೆ ಪಂದ್ಯವನ್ನು ಆಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇನ್ನು ಭಾರೀ ವಿರೋಧ ವ್ಯಕ್ತವಾದ ಪರಿಣಾಮ ಈ ಪಂದ್ಯದ ಟಿಕೆಟ್‌ಗೆ ಬೇಡಿಕೆ ಕುಸಿತವಾಗಿದೆ.
ಕಳೆದ ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಭೀಕರ ದಾಳಿಯ ನಂತರ ಪಾಕಿಸ್ತಾನ ವಿರುದ್ಧ ಎಲ್ಲಾ ರೀತಿಯ ಸಂಬಂಧ ಕಳೆದುಕೊಳ್ಳಲು ವ್ಯಾಪಕ ಒತ್ತಾಯ ಕೇಳಿಬಂದಿತ್ತು. ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ಪಾಕಿಸ್ತಾನ ವಿರುದ್ಧ ಆಡಲು ಭಾರತ ಸಜ್ಜಾಗಿದೆ. ಇಂದು ರಾತ್ರಿ ಎಂಟು ಗಂಟೆಗೆ ಪಂದ್ಯ ಆರಂಭವಾಗಲಿದ್ದು, ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…