ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ.
182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು.
ಪಾಕಿಸ್ತಾನದ ನಾಯಕ ಹಾಗೂ ಬ್ಯಾಟರ್ ಬಾಬರ್ ಆಝಂ ಬೇಗನೆ ವಿಕೆಟ್ ಕೈಚಲ್ಲಿದರು. ಫಾಖರ್ ಜುಮಾನ್ ಅವರು ಪದ್ಯಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಔಟಾದರು. ಆಗ ಜೊತೆಯಾದ ರಿಝ್ವಾನ್ ಹಾಗೂ ಮೊಹಮ್ಮದ್ ನವಾಜ್ 3ನೇ ವಿಕೆಟಿಗೆ 73 ರನ್ ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ನವಾಝ್ ವಿಕೆಟ್ ಉರುಳುಸಿದ ಭುವನೇಶ್ವರ ಕುಮಾರ್ ಈ ಜೋಡಿಯನ್ನು ಬೇರ್ಪಡಿಸಿದರು.
17ನೇ ಓವರ್ ನಲ್ಲಿ ರಿಝ್ವಾನ್ ವಿಕೆಟ್ ಅನ್ನು ಕಬಳಿಸಿದ ಹಾರ್ದಿಕ ಪಾಂಡ್ಯ ಪಾಕ್ ಗೆ ಆಘಾತ ನೀಡಿದರು. ಖುಷ್ ದಿಲ್ ಶಾ 14 ಹಾಗೂ ಆಸಿಫ್ ಅಲಿ 16 ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸಿದರು.
ಬೌಲಿಂಗ್ ನಲ್ಲಿ ಭಾರತದ ಪರ ಭುವನೇಶ್ವರ್, ಬಿಷ್ಣೋಯಿ, ಹಾರ್ದಿಕ್ ಪಾಂಡ್ಯ, ಯದುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ (60 ರನ್ 44 ಎಸೆತ) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…