Mysore
24
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

WTC ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತಂಡಕ್ಕೆ ಸಂದ ಜಯ ಟೀಂ ಇಂಡಿಯಾಗೆ ವರದಾನವಾಗಿ ಪರಿಣಮಿಸಿದೆ. ಹೀನಾಯ ಸೋಲು ಅನುಭವಿಸಿದ ನ್ಯೂಜಿಲೆಂಡ್‌ WTC (world test championship) 2023-25 ಟೂರ್ನಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದೆ.

ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನ್ಯೂಜಿಲೆಂಡ್‌ ಕುಸಿತ ಕಂಡರೆ, ಎರಡನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಮತ್ತು ಕಿವೀಸ್‌ ವಿರುದ್ಧ ಜಯ ದಾಖಲಿಸಿದ ಆಸೀಸ್‌ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.

ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿದ್ದು, 5 ಗೆಲುವು, 2 ಸೋಲು ಹಾಗೂ 1 ಡ್ರಾ ನೊಂದಿಗೆ ಒಟ್ಟು 62 ಪಾಯಿಂಟ್ಸ್​ ಕಲೆಹಾಕಿ ಅಗ್ರಸ್ಥಾನ ಅಲಂಕರಿಸಿದೆ.

ನ್ಯೂಝಿಲೆಂಡ್ ಈವರೆಗೆ ಆಡಿದ 5 ಪಂದ್ಯಗಳಲ್ಲಿ 3ರಲ್ಲಿ ಜಯ ಸಾಧಿಸಿದೆ. ಹಾಗೆಯೇ 2 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ ತಂಡ 11 ಪಂದ್ಯಗಳ ಪೈಕಿ 7 ಜಯ, 3 ಸೋಲು ಹಾಗೂ 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಸದ್ಯ 59.09% ಗೆಲುವಿನ ಶೇಕಡಾವಾರು ಹೊಂದಿದ್ದು 3ನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ ಕೇವಲ 2 ಪಂದ್ಯಗಳನ್ನಾಡಿದ್ದು, 1 ಪಂದ್ಯದಲ್ಲಿ ಗೆದ್ದರೆ, ಮತ್ತೊಂದು ಪಂದ್ಯ ಸೋತಿದೆ. ಈ ಮೂಲಕ 50.00% ಗೆಲುವಿನ ಶೇಕಡಾವಾರಿನೊಂದಿಗೆ 4ನೇ ಸ್ಥಾನದಲ್ಲಿದೆ.

ಪಾಕಿಸ್ತಾನ ಇದುವರೆಗೆ 5 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಗೆಲುವು, 3 ಪಂದ್ಯಗಳಲ್ಲಿ ಸೋಲನುಭವಿಸಿ 5ನೇ ಸ್ಥಾನದಲ್ಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!