ತಿರುವನಂತಪುರಂ : ಜೈಸ್ವಾಲ್, ಗಾಯಕ್ವಾಡ್ ಮತ್ತು ಇಶಾನ್ ಕಿಸಾನ್ ಆವರ ಅಮೊಘ ಅರ್ಧ ಶತಕ ಬಲದಿಂದ ಭಾರತ ತಂಡ ಆಸೀಸ್‌ಗೆ ಕಠಿಣ ಗುರಿ ನೀಡಿದೆ.
ಇಲ್ಲಿನ ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್ ಬ್ಯಾಟಿಂಗ್ ಮಾಡಿ 4 ವಿಕೆಟ್ ಕಳೆದಕೊಂಡು 235 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್ ಮತ್ತು ಋತುರಾಜ್ ಗಾಯಕ್ವಾಡ್ ಪವರ್ ಪ್ಲೇ ಒಳಗಡೆಯೇ 77 ರನ್ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್ 9 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 53 ರನ್ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 58 ರನ್ ಕಲೆಹಾಕಿದರು. ಪವರ್ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಮೂಲಕ 52 ರನ್ ಬಾರಿಸಿದರು.
ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 31 ರನ್ ಗಳಿಸಿದರು.
ಆಸೀಸ್ ಪರ ನಥನ್ ಏಲಿಸ್ 4-45-3, ಸ್ಟೋಯ್ನಿಸ್ 3-27-1 ವಿಕೆಟ್ ಪಡೆದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…