ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ.
ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ನಂತರ ತವರಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಹಾಗೂ ಟಿ20 ಸರಣಿ ಆಡಲಿದೆ. ಇದರ ಬೆನ್ನಲ್ಲೇ ನ್ಯೂಜಿಲೆಂಡ್ ಪ್ರವಾಸ ಆರಂಭವಾಗಲಿದ್ದು, ಇದಾದ ಬಳಿಕ ಟೀಮ ಇಂಡಿಯಾ ಹರಿಣಗಳ ಬೇಟೆಗಾಗಿ ಆಫ್ರಿಕಾಗೆ ಪ್ರವಾಸ ಮಾಡಲಿದೆ.
ಟೀಮ್ ಇಂಡಿಯಾ ವೇಳಾಪಟ್ಟಿ: ಭಾರತ ತಂಡ ವಿಶ್ವಕಪ್ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ನವೆಂಬರ್ 8ರಿಂದ ಆರಂಭವಾಗಲಿರುವ ಸರಣಿ ನವೆಂಬರ್ 15ಕ್ಕೆ ಕೊನೆಯಾಗಲಿದೆ.
ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ
ನವೆಂಬರ್. 8: ಮೊದಲ ಟಿ20- ಕಿಂಗ್ಸ್‌ಮೀಡ್ ಸ್ಟೇಡಿಯಂ, ಡರ್ಬನ್
ನವೆಂಬರ್. 10: ಎರಡನೇ ಟಿ20- ಸೇಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂ, ಗ್ಕೆಬರ್ಹಾ
ನವೆಂಬರ್. 13: ಮೂರನೇ ಟಿ20- ಸೂಪರ್‌ಸೋರ್ಟ್ ಪಾರ್ಕ್, ಸೆಂಚೂರಿಯನ್
ನವೆಂಬರ್. 15: ನಾಲ್ಕನೇ ಟಿ20- ದಿ ವಾಂಡರರ್ಸ್ ಸ್ಟೇಡಿಯಂ, ಜೋಹಾನ್ಸ್‌ಬರ್ಗ್
ಕಳೆದ ವರ್ಷ ದ್ವಿಪಕ್ಷೀಯ ಸರಣಿಯಲ್ಲಿ ಮೂರು ಮಾದರಿಯ ಪಂದ್ಯಾವಳಿಯಲ್ಲಿ ಟಿ20 ಪಂದ್ಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತ್ತು. ಇನ್ನು ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳನ್ನು 2-1 ಅಂತರದಿಂದ ರೋಚಕವಾಗಿ ಸೋಲಿಸಿತ್ತು. ಇನ್ನು ಎರಡು ಟೆಸ್ಟ್ ಪಂದ್ಯದಲ್ಲಿ ಇತ್ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದವು.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…