ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕ್ಯಾಂಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜೊತೆಯಾಗಿ ತಂಡವನ್ನು ಹೆಸರಿಸಿದ್ದಾರೆ. ಕೆಎಲ್ ರಾಹುಲ್ ಭಾರತ ತಂಡದ ಪ್ರಮುಖ ವಿಕೆಟ್-ಕೀಪರ್ ಬ್ಯಾಟರ್ ಆಗಿ ಆಯ್ಕೆ ಆಗಿದ್ದು, ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ.
ಏಷ್ಯಾಕಪ್ 2023 ಕ್ಕಾಗಿ ಪ್ರಸ್ತುತ ಶ್ರೀಲಂಕಾದಲ್ಲಿರುವ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಭಾರತ ತಂಡದ ವಿಶ್ವಕಪ್ ಪಟ್ಟಿಯಿಂದ ಹೊರಗುಳಿದಿದ್ದಾರೆ. ಭರ್ಜರಿ ಫಾರ್ಮ್ನಲ್ಲಿರುವ ಇಶಾನ್ ಕಿಶನ್ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ.ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ವಾಷಿಂಗ್ಟನ್ ಸುಂದರ್ ಮತ್ತು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಬ್ಬರನ್ನೂ ಕೈಬಿಡಲಾಗಿದೆ. ಆಲ್‌ರೌಂಡರ್‌ಗಳಾದ ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.
ಕೆಎಲ್ ರಾಹುಲ್ ಫಿಟ್ ಆಗಿದ್ದಾರೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಅಗರ್ಕರ್ ಹೇಳಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೂ ಸಂಪೂರ್ಣ ಫಿಟ್ ಇಲ್ಲದ ಕಾರಣ ಏಷ್ಯಾಕಪ್ನ ಮೊದಲ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ.ಇದೀಗ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿರುವ ರಾಹುಲ್ ಮುಂದಿನ ಪಂದ್ಯಕ್ಕೆ ಲಭ್ಯರಾಗಿ ವಿಶ್ವಕಪ್ಗೆ ತಯಾರಾಗಲಿದ್ದಾರೆ.
ಇನ್ನು ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಅದ್ಭುತ ಫಾರ್ಮ್ನಲ್ಲಿ ಇಲ್ಲದಿದ್ದರೂ ಇವರನ್ನು ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಇರುವ ಕಾರಣ ಸೂರ್ಯಕುಮಾರ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಗುವುದು ಅನುಮಾನ. ಸ್ಪಿನ್ ವಿಭಾಗದಲ್ಲಿ ರವೀಂದ್ರ ಜಡೇಜಾ ಭಾರತದ ಮೊದಲ ಆಯ್ಕೆಯಾಗಿದ್ದು, ಯುಜ್ವೇಂದ್ರ ಚಹಲ್ ಅವರನ್ನು ಪರಿಗಣಿಸಿಲ್ಲ. ಬದಲಾಗಿ ಕುಲ್ದೀಪ್ ಯಾದವ್ ಆಯ್ಕೆ ಆಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಇದ್ದಾರೆ. ವೇಗಿಗಳ ಸಾಲಿನಲ್ಲಿ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಇದ್ದಾರೆ.
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…
ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…