Mysore
26
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಅಂಡರ್-19 ಏಷ್ಯಾಕಪ್‌ಕ್ಕೆ ಭಾರತ ತಂಡ ಪ್ರಕಟ: ನಾಯಕನಾಗಿ ಉದಯ್ ಸಹರಾನ್

ನವದೆಹಲಿ : ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತವನ್ನು ಉದಯ್ ಸಹರಾನ್ ಅವರು ನಾಯಕನಾಗಿ ಮುನ್ನಡೆಸಲಿದ್ದಾರೆ. ಸೌಮಿ ಕುಮಾರ್ ಪಾಂಡೆಯನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಂಡರ್ -19 ಏಷ್ಯಾಕಪ್‌ನಲ್ಲಿ ಭಾರತ ಈವರೆಗೆ ಎಂಟು ಬಾರಿ ಪ್ರಶಸ್ತಿ ಗೆದ್ದು, ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ.

ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳದ ಸವಾಲನ್ನು ಎದುರಿಸಲಿದೆ. ಡಿಸೆಂಬರ್ 8 ರಂದು ಐಸಿಸಿ ಅಕಾಡೆಮಿ ಓವಲ್-1 ನಲ್ಲಿ ಆಫ್ಘನ್ ವಿರುದ್ಧದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಲಿದೆ. ಡಿಸೆಂಬರ್ 10 ರಂದು ಪಾಕಿಸ್ತಾನವನ್ನು ಮತ್ತು ಡಿಸೆಂಬರ್ 12 ರಂದು ನೇಪಾಳವನ್ನು ಎದುರಿಸಲಿದೆ. ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಭಾರತ ತಂಡ ಇಂತಿದೆ: ಉದಯ್ ಸಹರಾನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್( ವಿಕೆಟ್ ಕೀಪರ್) ಎಂ ಅಭಿಷೇಕ್, ಇನ್ನೇಶ್ ಮಹಾಜನ್ (ವಾಕ್), ಆರಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!