ನವದೆಹಲಿ : ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತವನ್ನು ಉದಯ್ ಸಹರಾನ್ ಅವರು ನಾಯಕನಾಗಿ ಮುನ್ನಡೆಸಲಿದ್ದಾರೆ. ಸೌಮಿ ಕುಮಾರ್ ಪಾಂಡೆಯನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಂಡರ್ -19 ಏಷ್ಯಾಕಪ್‌ನಲ್ಲಿ ಭಾರತ ಈವರೆಗೆ ಎಂಟು ಬಾರಿ ಪ್ರಶಸ್ತಿ ಗೆದ್ದು, ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ.
ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳದ ಸವಾಲನ್ನು ಎದುರಿಸಲಿದೆ. ಡಿಸೆಂಬರ್ 8 ರಂದು ಐಸಿಸಿ ಅಕಾಡೆಮಿ ಓವಲ್-1 ನಲ್ಲಿ ಆಫ್ಘನ್ ವಿರುದ್ಧದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಲಿದೆ. ಡಿಸೆಂಬರ್ 10 ರಂದು ಪಾಕಿಸ್ತಾನವನ್ನು ಮತ್ತು ಡಿಸೆಂಬರ್ 12 ರಂದು ನೇಪಾಳವನ್ನು ಎದುರಿಸಲಿದೆ. ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಭಾರತ ತಂಡ ಇಂತಿದೆ: ಉದಯ್ ಸಹರಾನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್( ವಿಕೆಟ್ ಕೀಪರ್) ಎಂ ಅಭಿಷೇಕ್, ಇನ್ನೇಶ್ ಮಹಾಜನ್ (ವಾಕ್), ಆರಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…