ಬೆಂಗಳೂರು: ಭಾರತದ ಅತಿಥ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಎರಡು ಟೆಸ್ಟ್ ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಿಡುಗಡೆ ಮಾಡಿದೆ.
ಅಕ್ಟೋಬರ್ 2ರಿಂದ 6ರವರೆಗೆ ಮೊಹಾಲಿಯಲ್ಲಿ ಮೊದಲ ಟೆಸ್ಟ್ ಮತ್ತು ಅ.10ರಿಂದ 14 ರವರೆಗೆ ಕೋಲ್ಕತ್ತಾದಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.
ಐಪಿಎಲ್ ನಂತರ ಜೂನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಆದಾದ ನಂತರ ವರ್ಷಾಂತ್ಯದ ವೇಳೆ ವಿಂಡೀಸ್ ಸರಣಿ ಆಯೋಜನೆಯಾಗಲಿದೆ.
ಕಳೆದೆರಡು ಸಾಲಿನಲ್ಲಿ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ತಲುಪಿದ್ದರೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿತ್ತು.





