ನಾಳೆ ( ನವೆಂಬರ್ 19 ) ಬಹು ನಿರೀಕ್ಷಿತ ವಿಶ್ವಕಪ್ ಫೈನಲ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಏಕದಿನ ವಿಶ್ವಕಪ್ ಫೈನಲ್ ಆಡಿರುವ ಆಸ್ಟ್ರೇಲಿಯಾ ವಿರುದ್ಧ ಈ ಬಾರಿಯ ಟೂರ್ನಿಯಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.
ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 1983ರ ವಿಶ್ವಕಪ್‌ನಿಂದ ಈ ಬಾರಿಯ ವಿಶ್ವಕಪ್‌ನ ಲೀಗ್ ಹಂತದ ಪಂದ್ಯದವರೆಗೂ ಒಟ್ಟು 13 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಎಲ್ಲಾ ಪಂದ್ಯಗಳ ಫಲಿತಾಂಶದ ವಿವರ ಈ ಕೆಳಕಂಡಂತಿದೆ..
1983 : ಜೂನ್ 13 – ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 162 ರನ್‌ಗಳ ಜಯ & ಜೂನ್ 20ರಂದು ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 118 ರನ್‌ಗಳ ಜಯ
1987: ಅಕ್ಟೋಬರ್ 9 – ಆಸ್ಟ್ರೇಲಿಯಾಗೆ 1 ರನ್ ಅಂತರದ ಜಯ & ಅಕ್ಟೋಬರ್ 22ರಂದು ಭಾರತಕ್ಕೆ 56 ರನ್‌ಗಳ ಜಯ
1992: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ ಒಂದು ರನ್ ಜಯ
1996: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 16 ರನ್ ಜಯ
1999: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 77 ರನ್ ಜಯ
2003: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 9 ವಿಕೆಟ್‌ಗಳ ಜಯ & ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ 125 ರನ್‌ಗಳ ಗೆಲುವು
2011: ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್‌ಗಳ ಗೆಲುವು
2015 : ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾಗೆ 95 ರನ್‌ಗಳ ಗೆಲುವು
2019: ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 36 ರನ್‌ಗಳ ಗೆಲುವು
2023: ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಗೆಲುವು
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…