ಕಳೆದ ಭಾನುವಾರ ( ನವೆಂಬರ್ 19 ) ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ ಭಾರತದಲ್ಲಿಯೇ ಬೀಡುಬಿಟ್ಟಿದ್ದು, ಈ ಹಿಂದೆ ನಿಗದಿಯಾಗಿದ್ದಂತೆ ನಾಳೆಯಿಂದ ( ನವೆಂಬರ್ 23 ) ಐದು ಪಂದ್ಯಗಳ ಟಿ 20 ಸರಣಿಯಲ್ಲಿ ಸೆಣಸಾಟ ನಡೆಸಲಿದೆ.
ಈ ಸರಣಿಯಲ್ಲಿ ಎರಡೂ ತಂಡಗಳ ಕೆಲ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಇನ್ನು ಈ ಸರಣಿಯಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳು ಎಲ್ಲೆಲ್ಲಿ ಯಾವ ದಿನ ನಡೆಯಲಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..
ಮೊದಲ ಟಿ 20 ಪಂದ್ಯ, ನವೆಂಬರ್ 23 : ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ
ಎರಡನೇ ಟಿ 20 ಪಂದ್ಯ, ನವೆಂಬರ್ 26 : ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ತಿರುವನಂತಪುರಂ
ಮೂರನೇ ಟಿ 20 ಪಂದ್ಯ, ನವೆಂಬರ್ 28 : ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣ, ಗುವಾಹಟಿ
ನಾಲ್ಕನೇ ಟಿ 20 ಪಂದ್ಯ, ಡಿಸೆಂಬರ್ 1: ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ರಾಯ್‌ಪುರ್
ಐದನೇ ಟಿ 20 ಪಂದ್ಯ, ಡಿಸೆಂಬರ್ 3 : ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಬೆಂಗಳೂರು.
( ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿವೆ )





