Mysore
22
haze

Social Media

ಭಾನುವಾರ, 28 ಡಿಸೆಂಬರ್ 2025
Light
Dark

ನಾಳೆಯಿಂದ ಭಾರತ vs ಇಂಗ್ಲೆಂಡ್‌ ಮೊದಲ ಟೆಸ್ಟ್:‌ ನೇರಪ್ರಸಾರ, ಸಂಭಾವ್ಯ ಆಡುವ ಬಳಗದ ಮಾಹಿತಿ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್‌ ತಂಡ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದ‌ಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ, ರಾಜ್‌ಕೋಟ್‌, ರಾಂಚಿ ಹಾಗೂ ಧರ್ಮಶಾಲಾ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ನಡೆಯಲಿವೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಮ್‌ ಇಂಡಿಯಾ ಕಣಕ್ಕಿಳಿಯಲಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ವಿರಾಟ್‌ ಕೊಹ್ಲಿ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. 16 ಆಟಗಾರರ ತಂಡ ಪ್ರಕಟಗೊಂಡಿದ್ದು, ಜಸ್‌ಪ್ರೀತ್‌ ಬುಮ್ರಾ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಿನ ಟೆಸ್ಟ್‌ ಸರಣಿಯ ನೇರಪ್ರಸಾರ ಸ್ಪೋರ್ಟ್ಸ್‌ 18 ಚಾನೆಲ್‌ನಲ್ಲಿ ಹಾಗೂ ಜಿಯೊ ಸಿನಿಮಾ ಒಟಿಟಿಯಲ್ಲಿ ಲಭ್ಯವಿರಲಿದೆ. ಇಂಗ್ಲೆಂಡ್‌ ಕೊನೆಯದಾಗಿ ಭಾರತದ ನೆಲದಲ್ಲಿ ಟೆಸ್ಟ್‌ ಸರಣಿ ಗೆದ್ದದ್ದು 2012ರಲ್ಲಿ, ಅಲಸ್ಟೇರ್‌ ಕುಕ್‌ ನಾಯಕನಾಗಿದ್ದಾಗ. ಇದಾದ ಬಳಿಕ ಸತತ 11 ವರ್ಷಗಳ ಕಾಲ ಭಾರತ ಸೋಲನ್ನೇ ಕಂಡಿಲ್ಲ.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್‌ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್

ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್‌ ಭರತ್, ರವಿಚಂದ್ರನ್‌ ಅಶ್ವಿನ್, ರವೀಂದ್ರ ಜಡೇಜಾ,‌ ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!