ಕ್ರೀಡೆ

ವಿಶ್ವಕಪ್‌ ಸೆಮಿಫೈನಲ್:‌ ಭಾರತ vs ನ್ಯೂಜಿಲೆಂಡ್‌ ಪಂದ್ಯದ ಅಂಪೈರ್‌ಗಳ ಘೋಷಣೆ

ಕಳೆದ ಅಕ್ಟೋಬರ್‌ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್‌ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ನಾಕ್‌ಔಟ್‌ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.

ಇನ್ನು ಒಂದನೇ ಸೆಮಿ ಫೈನಲ್‌ ಪಂದ್ಯ ನವೆಂಬರ್‌ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್‌ ಇಂಡಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್‌ 16ರಂದು ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್‌ 19ರ ಭಾನುವಾರದಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ.

ಇನ್ನು ಟೂರ್ನಿಯಲ್ಲಿ ಆಡಿದ ಎಲ್ಲಾ ಲೀಗ್‌ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಟೀಮ್‌ ಇಂಡಿಯಾ ನ್ಯೂಜಿಲೆಂಡ್‌ ತಂಡದ ವಿರುದ್ಧ ಗೆದ್ದು ಕಳೆದ ವಿಶ್ವಕಪ್‌ನ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಳ್ಳಲಿದೆಯಾ ಎಂಬ ಕುತೂಹಲ ಮೂಡಿದ್ದು, ಸದ್ಯ ಎಲ್ಲೆಡೆ ಪಂದ್ಯದ ಕುರಿತ ಚರ್ಚೆಗಳು ಜೋರಾಗಿವೆ. ಈ ಪಂದ್ಯಕ್ಕೆ ಆನ್‌ಫೀಲ್ಡ್‌ ಹಾಗೂ ಥರ್ಡ್‌ ಅಂಪೈರಿಂಗ್ ಯಾರು ಮಾಡಲಿದ್ದಾರೆ ಎಂಬ ಮಾಹಿತಿಯೂ ಸಹ ಹೊರಬಿದ್ದಿದೆ. ಆನ್‌ಫೀಲ್ಡ್‌ ಅಂಪೈರ್‌ಗಳಾಗಿ ರಿಚರ್ಡ್‌ ಇಲ್ಲಿಂಗ್‌ವರ್ಥ್‌ ಹಾಗೂ ರಾಡ್‌ ಟಕ್ಕರ್‌ ಕಣಕ್ಕಿಳಿಯಲಿದ್ದರೆ, ಥರ್ಡ್‌ ಅಂಪೈರ್‌ ಆಗಿ ಜ್ಯೋಲ್‌ ವಿಲ್‌ಸನ್‌ ಜವಾಬ್ದಾರಿ ಹೊರಲಿದ್ದಾರೆ.

andolana

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

7 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

7 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

8 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

9 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

9 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

9 hours ago