ಕ್ರೀಡೆ

IND vs SA 1st Test: ಕೆಎಲ್‌ ರಾಹುಲ್‌ ಶತಕ; ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 245ಕ್ಕೆ ಆಲ್‌ಔಟ್‌

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ನಿನ್ನೆಯಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಮೊದಲ ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್‌ಗಳು ಮಾತ್ರ ನಡೆದು 8 ವಿಕೆಟ್‌ ನಷ್ಟಕ್ಕೆ 208 ರನ್‌ ಕಲೆಹಾಕಿದ್ದ ಟೀಮ್‌ ಇಂಡಿಯಾ ಎರಡನೇ ದಿನದಾಟ ಆರಂಭವಾದ ಬಳಿಕ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಕೈಕೊಟ್ಟಿದ್ದು ಕೆಎಲ್‌ ರಾಹುಲ್‌ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 137 ಎಸೆತಗಳನ್ನು ಎದುರಿಸಿದ ಕೆಎಲ್‌ ರಾಹುಲ್‌ 101 ರನ್‌ ಬಾರಿಸಿದರು.

ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ರೋಹಿತ್‌ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್‌ 17 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಕೇವಲ 5 ರನ್‌ಗಳಿಗೆ ಔಟ್‌ ಆದರು. ಇನ್ನುಳಿದಂತೆ ಶುಭ್‌ಮನ್‌ ಗಿಲ್‌ 2, ವಿರಾಟ್‌ ಕೊಹ್ಲಿ 38, ಶ್ರೇಯಸ್‌ ಅಯ್ಯರ್‌ 31, ರವಿಚಂದ್ರನ್‌ ಅಶ್ವಿನ್‌ 8, ಶಾರ್ದೂಲ್‌ ಠಾಕೂರ್‌ 24, ಜಸ್‌ಪ್ರೀತ್‌ ಬುಮ್ರಾ ಕೇವಲ 1 ರನ್‌, ಮೊಹಮ್ಮದ್‌ ಸಿರಾಜ್‌ 5 ಹಾಗೂ ಪ್ರಸಿದ್ಧ್‌ ಕೃಷ್ಣ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಸೌತ್‌ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್‌ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್‌ 3, ಗೆರಾಲ್ಡ್‌ ಕೊಯೆಟ್ಜಿ ಹಾಗೂ ಮಾರ್ಕೊ ಯಾನ್‌ಸೆನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

3 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

4 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

5 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

5 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

6 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

6 hours ago