ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡ ಸದ್ಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್ 26 ) ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಿದೆ.
ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್‌ಗಳು ಮಾತ್ರ ನಡೆದಿದ್ದು ಟೀಮ್ ಇಂಡಿಯಾ 8 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿದೆ.
ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಕೈಕೊಟ್ಟಿದ್ದು ಕೆಎಲ್ ರಾಹುಲ್ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 105 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 70 ರನ್ ಬಾರಿಸಿದ್ದು ಮೊದಲ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದಿದ್ದಾರೆ ಹಾಗೂ 10 ಎಸೆತಗಳನ್ನು ಆಡಿ ಯಾವುದೇ ರನ್ ಗಳಿಸದಿರುವ ಮೊಹಮ್ಮದ್ ಸಿರಾಜ್ ಸಹ ಅಜೇಯರಾಗಿ ಉಳಿದುಕೊಂಡಿದ್ದಾರೆ.
ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್ 17 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ ಕೇವಲ 5 ರನ್‌ಗಳಿಗೆ ಔಟ್ ಆದರು. ಇನ್ನುಳಿದಂತೆ ಶುಭ್‌ಮನ್ ಗಿಲ್ 2, ವಿರಾಟ್ ಕೊಹ್ಲಿ 38, ಶ್ರೇಯಸ್ ಅಯ್ಯರ್ 31, ರವಿಚಂದ್ರನ್ ಅಶ್ವಿನ್ 8, ಶಾರ್ದೂಲ್ ಠಾಕೂರ್ 24 ಹಾಗೂ ಜಸ್‌ಪ್ರೀತ್ ಬುಮ್ರಾ ಕೇವಲ 1 ರನ್ ಕಲೆಹಾಕಿದರು.
ಸೌತ್ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್ ಹಾಗೂ ಮಾರ್ಕೊ ಯಾನ್‌ಸೆನ್ ಒಂದು ವಿಕೆಟ್ ಪಡೆದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…