ಕ್ರೀಡೆ

IND vs SA 1st Test: ಎರಡನೇ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ ಮೇಲುಗೈ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ನಿನ್ನೆಯಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಎರಡನೇ ದಿನದಾಟದಂತ್ಯಕ್ಕೆ 66 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 256 ರನ್‌ ಗಳಿಸುವ ಮೂಲಕ 11 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.

ದಕ್ಷಿಣ ಆಫ್ರಿಕಾದ ಪರ ಡೀನ್‌ ಎಲ್ಗರ್‌ ಶತಕ ಬಾರಿಸಿ ( 140 ) ಅಜೇಯರಾಗಿ ಉಳಿದುಕೊಂಡಿದ್ದರೆ, ಡೇವಿಡ್‌ ಬೆಡಿಂಗ್‌ಹ್ಯಾಮ್‌ 56 ರನ್‌ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಇನ್ನುಳಿದಂತೆ ಯಾವುದೇ ಬ್ಯಾಟ್ಸ್‌ಮನ್‌ ಸಹ ನಿರೀಕ್ಷಿಸಿದ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿಲ್ಲ. ಏಡನ್‌ ಮಾರ್ಕ್ರಮ್‌ 5 ರನ್‌, ಟೋನಿ ಡಿ ಝೋರ್ಝಿ 28, ಕೀಗನ್‌ ಪೀಟರ್ಸನ್‌ 2, ಕೈಲ್‌ ವೆರೆಯ್ನ್‌ 4 ಹಾಗೂ ಮಾರ್ಕೊ ಯಾನ್‌ಸೆನ್‌ ಅಜೇಯ 3 ರನ್‌ ಬಾರಿಸಿದರು.

ಭಾರತದ ಪರ ಮೊಹಮ್ಮದ್‌ ಸಿರಾಜ್‌ ಹಾಗೂ ಜಸ್‌ಪ್ರೀತ್‌ ಬುಮ್ರಾ ತಲಾ 2 ವಿಕೆಟ್‌ ಮತ್ತು ಪ್ರಸಿದ್ಧ್‌ ಕೃಷ್ಣ ಒಂದು ವಿಕೆಟ್‌ ಪಡೆದರು.

andolana

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

3 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

3 hours ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

3 hours ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

3 hours ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

3 hours ago