Mysore
20
clear sky

Social Media

ಭಾನುವಾರ, 21 ಡಿಸೆಂಬರ್ 2025
Light
Dark

IND vs SA 2nd T20: ಪಂದ್ಯದ ಟಾಸ್‌ ವರದಿ, ಆಡುವ ಬಳಗದ ಮಾಹಿತಿ

ಟೀಮ್‌ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್‌ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್‌ ಕೂಡ ಆಗದೇ ರದ್ದಾಗಿತ್ತು. ಇಂದು ( ಡಿಸೆಂಬರ್‌ 12 ) ಎರಡನೇ ಟಿ ಟ್ವೆಂಟಿ ಪಂದ್ಯ ಜಿಕೆಬರ್ಹಾದ ಸೇಂಟ್‌ ಜಾರ್ಜ್‌ ಪಾರ್ಕ್‌ನಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಸೂರ್ಯಕುಮಾರ್‌ ನೇತೃತ್ವದಲ್ಲಿ ಯುವ ಭಾರತ ತಂಡ ಕಣಕ್ಕಿಳಿದಿದ್ದು, ಅನಾರೋಗ್ಯದ ಸಮಸ್ಯೆಯಿಂದಾಗಿ ಈ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್‌ ಕಣಕ್ಕಿಳಿದಿಲ್ಲ. ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್‌ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್‌

ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯೂ ಬ್ರೀಟ್ಜ್ಕಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!