ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಡುತ್ತಿದ್ದು, ಇಂದು ( ಡಿಸೆಂಬರ್ 21 ) ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಮೊದಲ ಏಕದಿನ ಪಂದ್ಯವನ್ನು ಭಾರತ ತಂಡ ಗೆದ್ದಿದ್ದು, ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದಿದೆ. ಈ ಕಾರಣ ಈ ಮೂರನೇ ಪಂದ್ಯ ಡಿಸೈಡರ್ ಪಂದ್ಯವಾಗಿದ್ದು, ಜಯ ಸಾಧಿಸಲಿರುವ ತಂಡ ಸರಣಿಯನ್ನು ಗೆಲ್ಲಲಿದೆ. ಭಾರತ ತಂಡದ ಆಟಗಾರ ರಜತ್ ಪಾಟಿದಾರ್ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಮಾದರಿಗೆ ಪದಾರ್ಪಣೆ ಮಾಡಿದ್ದಾರೆ.
ಭಾರತ ಆಡುವ ಬಳಗ: ಸಂಜು ಸ್ಯಾಮ್ಸನ್, ಸಾಯಿ ಸುದರ್ಶನ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಕಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರಶ್ದೀಪ್ ಸಿಂಗ್, ಆವೇಶ್ ಖಾನ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ ಆಡುವ ಬಳಗ: ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲಿಜಾಡ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್





