Mysore
28
clear sky

Social Media

ಬುಧವಾರ, 22 ಏಪ್ರಿಲ 2026
Light
Dark

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಯಾವುದೇ ಹಂತದಲ್ಲಿ ಪೈಪೋಟಿ ನೀಡದೇ ಸೋಲೊಪ್ಪಿಕೊಂಡಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ಮೊದಲ ಓವರ್​ನಿಂದಲೇ ಹರಿಣ ಪಡೆ ಭಾರತದ ಬ್ಯಾಟರ್​ಗಳ ಮೇಲೆ ಪ್ರಾಬಲ್ಯ ಸಾಧಿಸಿತು. ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್​ಗಳಿಸಲಷ್ಟೇ ಶಕ್ತವಾಯಿತು.

ಮೊದಲ ಓವರ್‌ನಲ್ಲೇ ಇಶಾನ್ ಕಿಶನ್ ಖಾತೆ ತೆರೆಯುವ ಮುನ್ನವೇ ನಾಯಕ ಏಯ್ಡನ್ ಮಾರ್ಕ್‌ರಮ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ತಿಲಕ್ ವರ್ಮಾ ಒಂದು ರನ್‌ಗೆ ಮಾರ್ಕೊ ಯಾನ್ಸನ್‌ಗೆ ವಿಕೆಟ್ ಒಪ್ಪಿಸಿದರೆ, ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಅಭಿಷೇಕ್ ಶರ್ಮಾ 15 ರನ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್(18), ವಾಷಿಂಗ್ಟನ್ ಸುಂದರ್(11), ಹಾರ್ದಿಕ್ ಪಾಂಡ್ಯ(18) ಹಾಗೂ ರಿಂಕು ಸಿಂಗ್(0) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲವಾದರು. ಇನ್ನು ಶಿವಂ ದುಬೆ 37 ಎಸೆತಗಳಲ್ಲಿ 42 ರನ್ ಸಿಡಿಸಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ.

Tags:
error: Content is protected !!