ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಯಾವುದೇ ಹಂತದಲ್ಲಿ ಪೈಪೋಟಿ ನೀಡದೇ ಸೋಲೊಪ್ಪಿಕೊಂಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ಮೊದಲ ಓವರ್ನಿಂದಲೇ ಹರಿಣ ಪಡೆ ಭಾರತದ ಬ್ಯಾಟರ್ಗಳ ಮೇಲೆ ಪ್ರಾಬಲ್ಯ ಸಾಧಿಸಿತು. ಟೀಮ್ ಇಂಡಿಯಾ 18.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್ಗಳಿಸಲಷ್ಟೇ ಶಕ್ತವಾಯಿತು.
ಮೊದಲ ಓವರ್‌ನಲ್ಲೇ ಇಶಾನ್ ಕಿಶನ್ ಖಾತೆ ತೆರೆಯುವ ಮುನ್ನವೇ ನಾಯಕ ಏಯ್ಡನ್ ಮಾರ್ಕ್‌ರಮ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ತಿಲಕ್ ವರ್ಮಾ ಒಂದು ರನ್‌ಗೆ ಮಾರ್ಕೊ ಯಾನ್ಸನ್‌ಗೆ ವಿಕೆಟ್ ಒಪ್ಪಿಸಿದರೆ, ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಅಭಿಷೇಕ್ ಶರ್ಮಾ 15 ರನ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್(18), ವಾಷಿಂಗ್ಟನ್ ಸುಂದರ್(11), ಹಾರ್ದಿಕ್ ಪಾಂಡ್ಯ(18) ಹಾಗೂ ರಿಂಕು ಸಿಂಗ್(0) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲವಾದರು. ಇನ್ನು ಶಿವಂ ದುಬೆ 37 ಎಸೆತಗಳಲ್ಲಿ 42 ರನ್ ಸಿಡಿಸಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…