ಕ್ರೀಡೆ

ಭಾರತ ವಿರುದ್ಧ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌: ಆಸ್ಟ್ರೇಲಿಯಾ ತಂಡ ಪ್ರಕಟ

ಸಿಡ್ನಿ: ಮುಂಬರುವ ಜೂನ್‌ 7ರಂದು ಇಂಗ್ಲೆಂಡಿನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಆಸ್ಟ್ರೇಲಿಯಾದ ತಂಡವನ್ನು ಪ್ರಕಟಿಸಲಾಗಿದೆ.

ಡೇವಿಡ್‌ ವಾರ್ನರ್‌ ಸೇರಿದಂತೆ 17 ಜನರ ತಂಡವನ್ನು ಕ್ರಿಕೆಟ್‌ ಆಸ್ಟ್ರೇಲಿಯಾ ಪ್ರಕಟಿಸಿದೆ. ಮೇ 28ರಂದು 15 ಜನರ ತಂಡವನ್ನು ಅಂತಿಮವಾಗಿ ಪ್ರಕಟಿಸಲಾಗುವುದು ಎಂದು ಆಯ್ಕೆ ಸಮಿತಿ ತಿಳಿಸಿದೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಭಾರತದ ವಿರುದ್ಧ ನಡೆದ ಆ್ಯಶಸ್‌ ಟೆಸ್ಟ್‌ ಸರಣಿಯ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ.

ತಂಡ ಇಂತಿದೆ: ಪ್ಯಾಟ್ ಕಮನ್ಸ್ (ನಾಯಕ), ನಥನ್ ಲಯನ್, ಟಾಡ್ ಮುರ್ಫಿ, ಸ್ಕಾಟ್ ಬೋಲಾಂಡ್, ಉಸ್ಮಾನ್ ಖ್ವಾಜಾ, ಕ್ಯಾಮರೂನ್ ಗ್ರೀನ್, ಟ್ರಾವಿಸ್‌ ಹೆಡ್‌, ಮಾರ್ನಸ್‌ ಲಾಬುಷೇನ್‌, ಸ್ಟೀವ್‌ ಸ್ಮಿತ್‌ (ಉಪ ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕೇರಿ (ವಿಕೆಟ್ ಕೀಪರ್), ಮರ್ಕಸ್ ಹ್ಯಾರಿಸ್, ಹ್ಯಾಜಲ್‌ವುಡ್‌, ಜೋಶ್‌ ಇಂಕ್ಲಿಶ್‌, ಮಿಷೆಲ್‌ ಮಾರ್ಶ್‌, ಮಿಷೆಲ್‌ ಸ್ಟಾರ್ಕ್‌ ಹಾಗೂ ಮ್ಯಾಥಿವ್‌

ಈ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಜೂನ್‌ 7 ರಿಂದ 11ರ ವರೆಗೆ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದೆ.

2021ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲನುಭವಿಸಿದ್ದ ಭಾರತ ರನ್ನರ್-ಅಪ್ ಪ್ರಶಸ್ತಿಗೆ ಭಾಜನವಾಗಿತ್ತು.

andolanait

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

7 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

7 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

7 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

7 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

8 hours ago