ಬಾರ್ಬಡೋಸ್ (ವೆಸ್ಟ್ ಇಂಡೀಸ್): ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ. ಅಂದ ಹಾಗೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಸಂಜು ಸ್ಯಾಮ್ಸನ್ ಹಾಗೂ ಅಕ್ಷರ್ ಪಟೇಲ್ ಪ್ಲೇಯಿಂಗ್ XIಗೆ ಮರಳಿದ್ದಾರೆ.
ಇದೇ ಅಂಗಳದಲ್ಲಿ ನಡೆದಿದ್ದ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇದೀಗ ಎರಡನೇ ಏಕದಿನ ಪಂದ್ಯ ಗೆದ್ದು ಏಕದಿನ ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ.
A look at #TeamIndia's Playing XI for the 2nd ODI!@hardikpandya7 to lead the side today 👌
Follow the match – https://t.co/k4FosiRmuT#WIvIND pic.twitter.com/8wWBzdMrw7
— BCCI (@BCCI) July 29, 2023
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಕುಲ್‌ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್
ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಎಲಿಕ್ ಅಥಾನಾಜೆ, ಶೇಯ್ ಹೋಪ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಥಿ, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್