ಕ್ರೀಡೆ

ಭಾರತ-ವೆಸ್ಟ್‌ ಇಂಡೀಸ್‌ 2ನೇ ಏಕದಿನ: ಟಾಸ್‌ ಸೋತ ಭಾರತ ಮೊದಲ ಬ್ಯಾಟಿಂಗ್‌!

ಬಾರ್ಬಡೋಸ್‌ (ವೆಸ್ಟ್ ಇಂಡೀಸ್‌): ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದ ವೆಸ್ಟ್ ಇಂಡೀಸ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಭಾರತ ತಂಡ ಮೊದಲು ಬ್ಯಾಟ್‌ ಮಾಡಲಿದೆ. ಅಂದ ಹಾಗೆ ಈ ಪಂದ್ಯದಲ್ಲಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಸಂಜು ಸ್ಯಾಮ್ಸನ್‌ ಹಾಗೂ ಅಕ್ಷರ್‌ ಪಟೇಲ್‌ ಪ್ಲೇಯಿಂಗ್‌ XIಗೆ ಮರಳಿದ್ದಾರೆ.

ಇದೇ ಅಂಗಳದಲ್ಲಿ ನಡೆದಿದ್ದ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇದೀಗ ಎರಡನೇ ಏಕದಿನ ಪಂದ್ಯ ಗೆದ್ದು ಏಕದಿನ ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಹಾರ್ದಿಕ್‌ ಪಾಂಡ್ಯ ಮುನ್ನಡೆಸುತ್ತಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್‌ XI

ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಕುಲ್‌ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್‌: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಎಲಿಕ್ ಅಥಾನಾಜೆ, ಶೇಯ್ ಹೋಪ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಥಿ, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

39 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

44 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

48 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago