ಲಂಡನ್: ಭಾರತ ಟೆಸ್ಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲನುಭವಿಸಿದೆ. ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸೋತ ರೋಹಿತ್ ಪಡೆ ಮತ್ತೆ ಟ್ರೋಫಿಯಿಂದ ವಂಚಿತವಾಯಿತು.
ಪಂದ್ಯದ ಪ್ರದರ್ಶನದ ಬಗ್ಗೆ ಮಾಜಿ ಆಟಗಾರ ಸುನಿಲ್ ಗಾವಸ್ಕರ್ ಅವರು ಕಿಡಿಕಾರಿದ್ದಾರೆ. ಅವರು ತಂಡದ ಕಾರ್ಯ ವಿಧಾನವನ್ನು ಪ್ರಶ್ನಿಸಿದ್ದು, ಪಂದ್ಯದ ಸಮಯದಲ್ಲಿ ತಪ್ಪಾದ ಎಲ್ಲಾ ಅಂಶಗಳ ಮೇಲೆ ಇಡೀ ತಂಡವು ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾದಂತಹ ದೊಡ್ಡ ತಂಡಗಳ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ತಪ್ಪುಗಳನ್ನು ಪುನರಾವರ್ತಿಸುವುದನ್ನು ಮುಂದುವರಿಸಿದರೆ ವೆಸ್ಟ್ ಇಂಡೀಸ್‌ನಂತಹ ತಂಡಗಳ ವಿರುದ್ಧ ದ್ವಿಪಕ್ಷೀಯ ಸರಣಿಯಲ್ಲಿ ಗೆಲುವು ಸಾಧಿಸಿಯೂ ಏನೂ ಅರ್ಥವಿಲ್ಲ ಎಂದು ಗಾವಸ್ಕರ್ ಹೇಳಿದರು.
“ಹೌದು ವೆಸ್ಟ್ ಇಂಡೀಸ್ ವಿರುದ್ಧ ನಾವು ಎರಡು ಪಂದ್ಯಗಳನ್ನು ಆಡಲಿದ್ದೇವೆ. ಆದರೆ ವೆಸ್ಟ್ ಇಂಡೀಸ್ ವಿಶ್ವದ ಅತ್ಯುತ್ತಮ ತಂಡವಲ್ಲ. ನೀವು ಹೋಗಿ ಅವರನ್ನು 2-0, 3-0 ಅಂತರದಿಂದ ಗೆದ್ದರೂ ಪ್ರಯೋಜನವಿಲ್ಲ. ಏಕೆಂದರೆ ನೀವು ಫೈನಲ್ ಗೆ ಹೋದರೆ ನೀವು ಮತ್ತೆ ಆಸ್ಟ್ರೇಲಿಯಾದಂತಹ ತಂಡವನ್ನು ಎದುರಿಸಬೇಕು. ಆದರೆ ಅದೇ ತಪ್ಪುಗಳನ್ನು ಮಾಡುತ್ತಿದ್ದರೆ, ನೀವು ಟ್ರೋಫಿಯನ್ನು ಹೇಗೆ ಗೆಲ್ಲುತ್ತೀರಿ?” ಎಂದು ಗಾವಸ್ಕರ್ ಹೇಳಿದರು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…