ಟ್ರಿನಿಡಾಡ್ (ವೆಸ್ಟ್ ಇಂಡೀಸ್): ಮೊದಲನೇ ಟೆಸ್ಟ್ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ ತಂಡದ ಬೌಲರ್‌ಗಳು ಎರಡನೇ ಟೆಸ್ಟ್ ಪಂದ್ಯದಲ್ಲಿ ಮಖಾಗಿದ್ದಾರೆ. ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಪ್ರವಾಸಿ ಭಾರತ ತಂಡಕ್ಕೆ ಕಠಿಣ ಸವಾಲು ನೀಡುತ್ತಿದೆ.
ಶನಿವಾರ ಒಂದು ವಿಕೆಟ್ ನಷ್ಟಕ್ಕೆ 86 ರನ್‌ಗಳಿಗೆ ಪ್ರಥಮ ಇನಿಂಗ್ಸ್ ಮುಂದುರಿಸಿದ ವೆಸ್ಟ್ ಇಂಡೀಸ್ ತಂಡ 108 ಓವರ್‌ಗಳಿಗೆ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿದೆ. ಆ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ತಿರುಗೇಟು ನೀಡಿದೆ. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಕಿರ್ಕ್ ಮೆಕಂಜಿ ಅವರು 32 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದರು. ಆದರೂ ಡೆಬ್ಯೂಟಂಟ್ ಮುಖೇಶ್ ಕುಮಾರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡುತ್ತಿರುವ ನಾಯಕ ಕ್ರೇಗ್ ಬ್ರಾಥ್‌ವೇಟ್ ಭಾರತೀಯ ಬೌಲರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದಾರೆ. 75 ರನ್ ಗಳಿಸಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ಬ್ರಾಥ್‌ವೇಟ್ ಇನಿಂಗ್ಸ್‌ನಲ್ಲಿ 5 ಬೌಂಡರಿಗಳು ಹಾಗೂ ಒಂದು ಸಿಕ್ಸರ್ ಒಳಗೊಂಡಿದೆ. ಮತ್ತೊಂದು ತುದಿಯಲ್ಲಿ ಅಲಿಕ್ ಅಥಾನಾಜೆ 37 (111) ಇದ್ದಾರೆ.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ತಂಡ, 128 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 428 ರನ್‌ಗಳನ್ನು ಗಳಿಸಿತ್ತು. ಭಾರತ ತಂಡದ ಪರ ವಿರಾಟ್ ಕೊಹ್ಲಿ 121 ರನ್ ಗಳಿಸಿದ್ದರೆ, ನಾಯಕ ರೋಹಿತ್ ಶರ್ಮಾ (80), ಯಶಸ್ವಿ ಜೈಸ್ವಾಲ್ (57), ರವೀಂದ್ರ ಜಡೇಜಾ (61) ಹಾಗೂ ಆರ್ ಅಶ್ವಿನ್ (56) ಅರ್ಧಶತಕಗಳನ್ನು ಸಿಡಿಸಿದ್ದರು.
ಭಾರತ: ಪ್ರಥಮ ಇನಿಂಗ್ಸ್‌ನಲ್ಲಿ 128 ಓವರ್‌ಗಳಿಗೆ 438-10 (ವಿರಾಟ್ ಕೊಹ್ಲಿ 121, ರೋಹಿತ್ ಶರ್ಮಾ 80, ರವೀಂದ್ರ ಜಡೇಜಾ 61, ಯಶಸ್ವಿ ಜೈಸ್ವಾಲ್ 57, ಆರ್ ಅಶ್ವಿನ್ 56; ಕೆಮರ್ ರೋಚ್ 104ಕ್ಕೆ 3, ಜೊಮೆಲ್ ವಾರಿಕನ್ 89ಕ್ಕೆ 3, ಜೇಸನ್ ಹೋಲ್ಡರ್ 57ಕ್ಕೆ 2
ವೆಸ್ಟ್ ಇಂಡೀಸ್: ಪ್ರಥಮ ಇನಿಂಗ್ಸ್‌ನಲ್ಲಿ 108 ಓವರ್‌ಗಳಿಗೆ 229-5 (ಕ್ರೇಗ್ ಬ್ರಾಥ್‌ವೇಟ್ 75, ತ್ಯಾಗಿ ನಾರಾಯಣ್ ಚಂದ್ರಪಾಲ್ 33, ಕಿರ್ಕ್ ಮೆಕಂಜಿ 32; ರವೀಂದ್ರ ಜಡೇಜಾ 37ಕ್ಕೆ 2, ಮುಖೇಶ್ ಕುಮಾರ್ 35ಕ್ಕೆ 1, ಆರ್ ಅಶ್ವಿನ್ 61 ಕ್ಕೆ 1)
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…