ಪಲ್ಲೆಕೆಲೆ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ 43 ರನ್‌ಗಳ ಗೆಲುವನ್ನು ದಾಖಲಿಸಿದೆ. ಈ ಮೂಲಕ ಗೌತಮ್ ಗಂಭೀರ್ ತರಬೇತಿಯ ಭಾರತ ತನ್ನ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆದಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆರಿಸಿಕೊಂಡು ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿ ಶ್ರೀಲಂಕಾಗೆ ಗೆಲ್ಲಲು 214 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಶ್ರೀಲಂಕಾ ಭಾರತದ ಬೌಲಿಂಗ್ ಮುಂದೆ ಮಂಕಾಗಿ 19.2 ಓವರ್‌ಗಳಲ್ಲಿ 170 ರನ್‌ಗಳಿಗೆ ಆಲ್‌ಔಟ್ ಆಯಿತು.
ಟೀಮ್ ಇಂಡಿಯಾ ಇನ್ನಿಂಗ್ಸ್: ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಶುಭ್‌ಮನ್ ಗಿಲ್ ಉತ್ತಮ ಆರಂಭ ಕಟ್ಟಿಕೊಟ್ಟರು. ಜೈಸ್ವಾಲ್ 40 (21) ರನ್ ಗಳಿಸಿದರೆ, ಶುಭ್‌ಮನ್ ಗಿಲ್ 34 (16) ರನ್ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್ ಯಾದವ್ 58 (26) ರನ್ ಹಾಗೂ ರಿಷಭ್ ಪಂತ್ 49 (33) ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಹಾರ್ದಿಕ್ ಪಾಂಡ್ಯ 9 (10) ರನ್, ರಿಯಾನ್ ಪರಾಗ್ 7 (6) ರನ್, ರಿಂಕು ಸಿಂಗ್ 1 (2) ರನ್, ಅಕ್ಷರ್ ಪಟೇಲ್ ಅಜೇಯ 10 (5) ರನ್ ಮತ್ತು ಅರ್ಷ್‌ದೀಪ್ ಸಿಂಗ್ ಅಜೇಯ 1 (1) ರನ್ ಗಳಿಸಿದರು.
ಶ್ರೀಲಂಕಾದ ಪರ ಮತೀಶ ಪತಿರಾಣ 4 ವಿಕೆಟ್, ವವಿಂದು ಹಸರಂಗ, ಅಸಿತಾ ಫರ್ನಾಂಡೊ ಮತ್ತು ದಿಲ್‌ಶಾನ್ ಮಧುಶಂಕ ತಲಾ ಒಂದೊಂದು ವಿಕೆಟ್ ಪಡೆದರು.
ಶ್ರೀಲಂಕಾ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರರು ಉತ್ತಮ ಇನ್ನಿಂಗ್ಸ್ ಆಡಿದರೂ ಉಳಿದ ಆಟಗಾರರು ರನ್ ಗಳಿಸಲು ಪರದಾಡಿದರು. ಪಥಮ್ ನಿಸ್ಸಂಕ 79 (48) ರನ್, ಕುಸಾಲ್ ಮೆಂಡಿಸ್ 45 (27) ರನ್ ಬಾರಿಸಿದರು. ಇನ್ನುಳಿದಂತೆ ಕುಸಾಲ್ ಪೆರೆರಾ 20, ಕಮಿಂದು ಮೆಂಡಿಸ್ 12, ಚರಿತ್ ಅಸಲಂಕ ಡಕ್‌ಔಟ್, ದಸುನ್ ಶನಕ ಡಕ್‌ಔಟ್, ವನಿಂದು ಹಸರಂಗ 2, ಮಹೀಶ್ ತೀಕ್ಷಣ 2, ಮಹೀಸ್ ಪತಿರಾಣಾ 6, ದಿಲ್‌ಶಾನ್ ಮಧುಶಂಕ ಡಕ್‌ಔಟ್ ಮತ್ತು ಅಸಿತಾ ಫೆರ್ನಾಂಡೊ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಭಾರತದ ಪರ ರಿಯಾನ್ ಪರಾಗ್ 3 ವಿಕೆಟ್, ಅರ್ಷ್‌ದೀಪ್ ಸಿಂಗ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡೆರಡು ವಿಕೆಟ್, ರವಿ ಬಿಷ್ಣೋಯಿ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…