ಕ್ರೀಡೆ

ಭಾರತ-ವಿಂಡೀಸ್‌ ಸರಣಿ: ಪ್ರಥಮ ದರ್ಜೆ ಕ್ರಿಕೆಟಿಗರಿಗೆ ಚಾನ್ಸ್ ಕೊಡಿ ಎಂದ ಮಾಂಜ್ರೇಕರ್!

ನವದೆಹಲಿ: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರಿಗೆ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಟೀಮ್ ಇಂಡಿಯಾವನ್ನು ಬಲಿಷ್ಠಗೊಳಿಸಬೇಕೆಂದು ಬಿಸಿಸಿಐ ಆಯ್ಕೆ ಸಮಿತಿಗೆ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಸಲಹೆ ನೀಡಿದ್ದಾರೆ.

ಲಂಡನ್‌ನ ದಿ ಓವಲ್ ಅಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ 209 ರನ್‌ಗಳಿಂದ ಸೋಲು ಕಂಡಿತ್ತು. ಆ ಮೂಲಕ ದಶಕದ ನಂತರ ಭಾರತ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತ್ತು. ಇದರ ಬೆನ್ನಲ್ಲೆ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸಬೇಕೆಂದು ಹಲವು ಕ್ರಿಕೆಟಿಗರು ಸಲಹೆ ನೀಡಿದ್ದರು.

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಇಎಸ್‌ಪಿಎನ್ ಕ್ರಿಕ್‌ಇನ್ಫೋ ಜೊತೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿ, ಐಪಿಎಲ್ ಟೂರ್ನಿಯಲ್ಲಿ ಸ್ಫೋಟಕ ಪ್ರದರ್ಶನ ನೀಡಿರುವ ಆಟಗಾರರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡುವುದಕ್ಕಿಂತ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ತಮ್ಮ ಕೌಶಲ ತೋರಿರುವ ಅಭಿಮನ್ಯು ಈಶ್ವರನ್, ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ್, ರಜತ್ ಪಾಟಿದಾರ್ ಅವರಂತಹ ಆಟಗಾರರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಕಲ್ಪಿಸಬೇಕು. ಮುಂಬರುವ ವೆಸ್ಟ್ ಇಂಡೀಸ್ ಸರಣಿಯಲ್ಲಿ ನಾನು ಕನಿಷ್ಠ 3 ಯುವ ಬ್ಯಾಟರ್‌ಗಳು ಹಾಗೂ ಅಷ್ಟೇ ಪ್ರಮಾಣದ ವೇಗದ ಬೌಲರ್‌ಗಳನ್ನು ನೋಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟಿಗರಿಗೆ ಅವಕಾಶ ನೀಡಿ: ಮಾಂಜ್ರೇಕರ್‌: “ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸ್ಟೀವನ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಅವರು ಹೆಚ್ಚಾಗಿ ಟಿ20 ಸ್ವರೂಪದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ದರಿಂದ ನಾವು ಅತಿ ಬೇಗ ಸುಸ್ತಾಗುವ ಮತ್ತು ಐಪಿಎಲ್ ಮಾದರಿಯಿಂದ ಟೆಸ್ಟ್‌ಗೆ ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುವ ಆಟಗಾರರಿಗಿಂತ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರನ್ನು ಹುಡುಕಬೇಕು,

ಆಯ್ಕೆದಾರರು ಭವಿಷ್ಯದ ಆಟಗಾರರನ್ನು ಆಯ್ಕೆ ಮಾಡುವತ್ತ ಗಮನ ಹರಿಸಬೇಕು, ಅಂತಹ ಆಟಗಾರರು ವಿದೇಶಿ ಪಿಚ್‌ಗಳಲ್ಲೂ ಯಶಸ್ಸು ಕಾಣುವಂತಿರಬೇಕು. ವೆಸ್ಟ್ ಇಂಡೀಸ್ ಸರಣಿಯಲ್ಲಿ ನಾನು ಕನಿಷ್ಠ ಮೂವರು ಉದಯೋನ್ಮುಖ ಬ್ಯಾಟರ್‌ಗಳು ಮತ್ತು ಕೆಲವು ಬೌಲರ್‌ಗಳನ್ನು ನೋಡಲು ಇಷ್ಟಪಡುತ್ತೇನೆ, ” ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಳಿದ್ದಾರೆ.

“ಬ್ಯಾಟಿಂಗ್ ವಿಚಾರದಲ್ಲಿ ಹೇಳುವುದಾದರೆ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಆಟಗಾರರು ತೋರಿರುವ ಪ್ರದರ್ಶನವನ್ನು ಪರಿಗಣಿಸಬೇಕೆ ಹೊರತು ಆತ ಹೊಡೆದಿರುವ ರನ್ ಗಳನ್ನಲ್ಲ. ಪ್ರಥಮ ದರ್ಜೆ ಕ್ರಿಕೆಟ್ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ ಟೀಮ್ ಇಂಡಿಯಾದಲ್ಲಿ 3,4 ಹಾಗೂ 5ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಲ್ಲ ಉತ್ತಮ ಕೌಶಲ್ಯತೆ ಹೊಂದಿರುವ ಆಟಗಾರರು ಸಿಗುತ್ತಾರೆ, ಅಂತಹ ಆಟಗಾರರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಿ” ಎಂದು ಖ್ಯಾತ ಕ್ರಿಕೆಟ್ ವಿಶ್ಲೇಷಕ ವಿಶ್ಲೇಷಿಸಿದ್ದಾರೆ.

ಬ್ಯಾಕಪ್ ಬೌಲರ್‌ಗಳನ್ನು ಕರೆ ತನ್ನಿ: ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಬಹಳ ದುರ್ಬಲವಾಗಿದೆ. ಜಸ್‌ಪ್ರೀತ್‌ ಬುಮ್ರಾ, ಪ್ರಸಿಧ್ ಕೃಷ್ಣ ಮತ್ತು ಕೆಲ ಯುವ ಬೌಲರ್‌ಗಳು ಗಾಯದ ಸಮಸ್ಯೆ ಎದುರಿಸುತ್ತಿದ್ದು, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ಉಮೇಶ್ ಯಾದವ್ ನಿವೃತ್ತಿಯ ಹಂತ ತಲುಪಿದ್ದಾರೆ.

“ಕೆಲವು ತಿಂಗಳ ಹಿಂದಷ್ಟೇ ನಾನು ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದ ಬಗ್ಗೆ ಬಹಳ ಹೆಮ್ಮೆ ಪಡುತ್ತಿದ್ದೆ. ಆದರೆ ಜಸ್‌ಪ್ರೀತ್‌ ಬುಮ್ರಾ, ಪ್ರಸಿಧ್ ಕೃಷ್ಣ ಹಾಗೂ ಕೆಲವು ಉದಯೋನ್ಮುಖ ಬೌಲರ್‌ಗಳು ಗಾಯಗೊಂಡಿದ್ದು, ತಂಡ ನಿಪುಣ ಬೌಲರ್‌ಗಳ ಸಮಸ್ಯೆ ಎದುರಿಸುತ್ತಿದೆ. ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರು ಟೆಸ್ಟ್ ಸ್ವರೂಪಕ್ಕೆ ಹೊಂದಾಣಿಕೆ ಆಗುವಂತಹ ವೇಗದ ಬೌಲರ್‌ಗಳನ್ನು ಗುರುತಿಸುವ ಅವಶ್ಯಕತೆ ಇದೆ. ಮೂಲ ಬೌಲರ್‌ಗಳು ಗಾಯಗೊಂಡಾಗ ಅವರಷ್ಟೇ ಪರಿಣಾಮಕಾರಿ ಬೌಲಿಂಗ್ ಸಂಯೋಜನೆ ತೋರುವ ಬ್ಯಾಕಪ್ ಬೌಲರ್‌ಗಳ ಅವಶ್ಯಕತೆ ಇದೆ. ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಸ್ಕಾಟ್ ಬೋಲೆಂಡ್‌ ಬ್ಯಾಕಪ್ ಬೌಲರ್ ರೂಪದಲ್ಲಿ ಬಂದು ಪರಿಣಾಮಕಾರಿ ಬೌಲಿಂಗ್ ಪ್ರದರ್ಶಿಸಿದ್ದರು. ಆದರೆ ಟೀಮ್ ಇಂಡಿಯಾ ಉಮೇಶ್ ಯಾದವ್‌ಗೆ ಸ್ಥಾನ ಕಲ್ಪಿಸಿತ್ತು. ಅದು ಸರಿಯಾದ ಕ್ರಮವಲ್ಲ,” ಎಂದು ಸಂಜಯ್ ಮಾಂಜ್ರೇಕರ್ ಹೇಳಿದ್ದಾರೆ.

andolanait

Recent Posts

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

2 mins ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

25 mins ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

36 mins ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

42 mins ago

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

2 hours ago

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

2 hours ago