ಹೊಸದಿಲ್ಲಿ : ಅಂಧರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಕೊಲಂಬೊದ ಪಿ ಸಾರಾ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 114 ರನ್‌ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 12 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 117 ರನ್‌ಗಳಿಸಿ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಭಾರತ ಮಹಿಳಾ ತಂಡವು ಚೊಚ್ಚಲ ಬಾರಿಗೆ ಅಂಧರ ಟಿ20 ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.





