ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ ಆಯ್ಕೆ ಸಮಿತಿಯು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ಎರಡೂ ಮಾದರಿಗಳಲ್ಲಿಯೂ ನಾಯಕಿಯಾಗಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ.
ಸೈಕಾ ಇಶಾಕ್, ಶ್ರೇಯಾಂಕಾ ಪಾಟೀಲ್, ಟಿಟಾಸ್ ಸಾಧು ಮತ್ತು ಮನ್ನತ್ ಕಶ್ಯಪ್ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಏಕದಿನ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ರೇಣುಕಾ ಸಿಂಗ್ ಮತ್ತು ರಿಚಾ ಘೋಷ್ ಕೂಡ ಏಕದಿನ ಕ್ರಿಕೆಟ್‌ಗೆ ಮರಳಿದ್ದಾರೆ. ಉಮಾ ಛೆಟ್ರಿ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಇನ್ನು ಟಿ20 ಕ್ರಿಕೆಟ್ ಬಗ್ಗೆ ಹೇಳುವುದಾದರೆ ಇಂಗ್ಲೆಂಡ್ ವಿರುದ್ಧ 1-2 ಅಂತರದಲ್ಲಿ ಸೋತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಏಕದಿನದಲ್ಲಿಯೂ ಬೌಲಿಂಗ್ ದಾಳಿಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ. ಪೂಜಾ ಪೂನಿಯಾ, ದೇವಿಕಾ ವೈದ್ಯ, ಅಂಜಿಲ್ ಸರ್ವಾನಿ, ಬಿ. ಅನುಷ್ಕಾ, ಮೇಘನಾ ಸಿಂಗ್, ರಾಶಿ ಕನೌಜಿಯಾ ಮತ್ತು ಮೋನಿಕಾ ಪಟೇಲ್ ಅವಕಾಶದಿಂದ ವಂಚಿತರಾಗಿದ್ದಾರೆ.
ಟೀಂ ಇಂಡಿಯಾ ಮತ್ತು ಆಸೀಸ್ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಡಿಸೆಂಬರ್ 28 ರಂದು ಮೊದಲ ಪಂದ್ಯ ಆಡಿದರೆ, ಕ್ರಮವಾಗಿ ಡಿಸೆಂಬರ್ 30 ಮತ್ತು ಜನವರಿ 2 ರಂದು ಎರಡು ಮತ್ತು ಮೂರನೇ ಪಂದ್ಯಗಳನ್ನು ಆಡಲಿದ್ದಾರೆ.
ತನ್ನ ಅತ್ಯಮೋಘ ಪ್ರದರ್ಶನ ಮೂಲಕ ಮೊಟ್ಟ ಮೊದಲ ಬಾರಿ ಆಸೀಸ್ ತಂಡವನ್ನು ಟೆಸ್ಟ್ ನಲ್ಲಿ ಸೋಲಿಸಿ ದಾಖಲೆ ಬರೆದಿದ್ದ ಟೀಂ ಇಂಡಿಯಾ ತಂಡ ಇದೀಗ ಮೂರು ಪಂದ್ಯಗಳ ಏಕದಿನ ಸರಣಿ ಗೆಲ್ಲಲು ಸಜ್ಜಾಗಿದೆ.
ಟೀಂ ಇಂಡಿಯಾ ಏಕದಿನ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್, ಮನ್ನತ್ ಕಶ್ಯಕ್, ಸೈಕಾ ಇಶಾಕ್, ರೇಣುಕಾ ಸಿಂಗ್, ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್..
ಟೀಂ ಇಂಡಿಯಾ ಟಿ20 ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಕಪ್, ಸೈಕಾ ಇಶಾಕ್, ರೇಣುಕಾ ಸಿಂಗ್. ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ