ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ತಂಡದ ನಾಯಕಿಯಾಗಿ ಹರ್ಮನ್ ಪ್ರೀತ್ ಕೌರ್ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ ಉಳಿದಿದ್ದ ಹರ್ಲೀನ್ ಡಿಯೋಲ್ ಈ ಸರಣಿಗೆ ಆಯ್ಕೆಯಾಗಿದ್ದು, ಶ್ರೆಯಾಂಕಾ ಪಾಟೀಲ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಿದ್ದ ಶ್ರೆಯಾಂಕಾ ಪಾಟೀಲ್, ಒಟ್ಟು 3 ಏಕದಿನ ಪಂದ್ಯಗಳನ್ನಾಡಿದ್ದು 5 ವಿಕೆಟ್ ಕಬಳಿಸಿದ್ದಾರೆ.
ಭಾರತದಲ್ಲಿ 2023ರಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆಡಿದ ಸರಣಿಯೇ ಹರ್ಲೀನ್ ಡಿಯೋಲ್ ಅವರ ಕೊನೆಯ ಸರಣಿಯಾಗಿತ್ತು. ಇದೀಗ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತದ ಏಕದಿನ ತಂಡ: ಹರ್ಮನ್ ಪ್ರೀತ್ ಕೌರ್(ನಾಯಕಿ), ಸ್ನೃತಿ ಮಂದಾನ(ಉಪನಾಯಕಿ), ಪ್ರಿಯಾ ಪುನಿಯಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ರಿಚಾ ಘೋಷ್(ವಿಕೆಟ್ ಕೀಪರ್), ತೇಜಲ್ ಹಸಬ್ನಿಸ್, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ರಾಧಾ ಯಾದವ್, ಟಿಟಾಸ್ ಸಾಧು, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಸೈಮಾ ಠಾಕೂರ್.