ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ ತಂಡವು 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಟೀಮ್ ಇಂಡಿಯಾಗೆ ಸೋಲುಣಿಸಿತ್ತು. ಇನ್ನು 2ನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಹೀಗಾಗಿ ಮೂರನೇ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯವಾಗಿತ್ತು.
ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಕೇವಲ 99ರನ್‌ಗೆ ಆಲೌಟ್ ಆಯಿತು. 100ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ನೀಡಲು ಸಾಧ್ಯವಾಗಲಿಲ್ಲ. ನಾಯಕ ಶಿಖರ್ ಧವನ್ 8 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. ಆದರೆ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಜೊತೆಯಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿಯತ್ತ ಸಾಗಿತು.
ಆದರೆ ಇಶಾನ್ ಕಿಶನ್ 10 ರನ್ ಸಿಡಿಸಿ ಔಟಾದರು. ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ನೀಡಿದರು. ದಿಟ್ಟ ಹೋರಾಟ ನೀಡಿದ ಗಿಲ್ 49 ರನ್ ಸಿಡಿಸಿ ಔಟಾದರು. ಇತ್ತ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಹೋರಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿ ತಲುಪಿತು. ಅಯ್ಯರ್ ಅಜೇಯ 28 ರನ್ ಸಿಡಿಸಿದರೆ, ಸ್ಯಾಮ್ಸನ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …