ಕ್ರೀಡೆ

ಏಕದಿನ ಪಂದ್ಯ : ಸೌತ್‌ ಆಫ್ರಿಕಾ ವಿರುದ್ಧ ಸರಣಿಗೆದ್ದ ಭಾರತ.!

ನವದೆಹಲಿ:  ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ ತಂಡವು 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಟೀಮ್ ಇಂಡಿಯಾಗೆ ಸೋಲುಣಿಸಿತ್ತು. ಇನ್ನು 2ನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಹೀಗಾಗಿ ಮೂರನೇ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯವಾಗಿತ್ತು.

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಕೇವಲ 99ರನ್‌ಗೆ ಆಲೌಟ್ ಆಯಿತು. 100ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ನೀಡಲು ಸಾಧ್ಯವಾಗಲಿಲ್ಲ. ನಾಯಕ ಶಿಖರ್ ಧವನ್ 8 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. ಆದರೆ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಜೊತೆಯಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿಯತ್ತ ಸಾಗಿತು.

ಆದರೆ ಇಶಾನ್ ಕಿಶನ್ 10 ರನ್ ಸಿಡಿಸಿ ಔಟಾದರು. ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ನೀಡಿದರು.  ದಿಟ್ಟ ಹೋರಾಟ ನೀಡಿದ ಗಿಲ್ 49 ರನ್ ಸಿಡಿಸಿ ಔಟಾದರು. ಇತ್ತ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಹೋರಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿ ತಲುಪಿತು. ಅಯ್ಯರ್ ಅಜೇಯ 28 ರನ್ ಸಿಡಿಸಿದರೆ, ಸ್ಯಾಮ್ಸನ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

 

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago