ಚೆನ್ನೈ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ-2023 ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ರೋಚಕ ಜಯ ಸಾಧಿಸಿದೆ. ಆ ಮೂಲಕ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.
ಚೆನ್ನೈನಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ 4-3 ಅಂತರದಲ್ಲಿ ಮಲೇಷ್ಯಾ ವಿರುದ್ಧ ವಿರೋಚಿತ ಜಯ ಗಳಿಸಿತು. ಆ ಮೂಲಕ ACT ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.
ರಣರೋಚಕ ಆಟದಲ್ಲಿ ಮೊದಲ ಕ್ವಾರ್ಟರ್‌ನಲ್ಲಿ ಭಾರತದ ಜುಗರಾಜ್ ಸಿಂಗ್ ಗೋಲು ಗಳಿಸಿ ಭಾರತಕ್ಕೆ ಆರಂಭಿಕ ಮುನ್ನಡೆ ಒದಗಿಸಿದರು. ಆದರೆ ಮಲೇಷ್ಯಾದ ಕಮಲ್ ಅಬು ಅರ್ಜೈ 1-1 ರಿಂದ ಸಮಬಲ ಸಾಧಿಸಿದರು. ನಂತರ ಎರಡನೇ ಕ್ವಾರ್ಟರ್‌ನಲ್ಲಿ ರಾಝೀ ರಹೀಮ್ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ಮಲೇಷ್ಯಾಗೆ 2-1 ಗೋಲು ಗಳಿಸಿದರು. ಅಮಿನುದ್ದೀನ್ ಮುಹಮ್ಮದ್ ಎರಡನೇ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ 3-1 ಗೋಲು ಗಳಿಸಿದರು.
ಈ ವೇಳೆ ಭಾರತ ಮತ್ತೆ ಪುಟಿದೆದ್ದಿತು. ಮೂರನೇ ಕ್ವಾರ್ಟರ್‌ನಲ್ಲಿ ಹರ್ಮನ್‌ಪ್ರೀತ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಅನ್ನು 2-3 ಗೆ ಪರಿವರ್ತಿಸಿದರು. ನಂತರ ಗುರ್ಜಂತ್ 3-3 ಮೂಲಕ ಸಮಬಲಕ್ಕೆ ತಂದರು. ಕೊನೆಯದಾಗಿ ಆಕಾಶದೀಪ್ ಗೋಲ್ ನೀಡುವ ಮೂಲಕ ACT ಪ್ರಶಸ್ತಿಯನ್ನು ಭಾರತ ಮುಡಿಗೇರಿಸಿಕೊಳ್ಳಲು ಸಹಾಯ ಮಾಡಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…