ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ 100ಕ್ಕೂ ಹೆಚ್ಚು ಪದಕ ಗೆದ್ದು ಇತಿಹಾಸ ಬರೆದ ಭಾರತ : ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ಇತ್ತೀಚಿಗೆ ಅಂತ್ಯಗೊಂಡಿದ್ದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 100ಕ್ಕೂ ಹೆಚ್ಚು ಪದಕ ಗೆದ್ದು ಹೊಸ ಇತಿಹಾಸ ಬರೆದಿತ್ತು. ಇದೀಗ ಚೀನಾದಲ್ಲಿ ನಡೆದ 4ನೇ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳ ಗೆದ್ದು ಇತಿಹಾಸ ಬರೆದಿದ್ದಾರೆ.

ಪುರುಷರ 400 ಮೀಟರ್ ಟಿ47 ಸ್ಪರ್ಧೆಯಲ್ಲಿ ದಿಲೀಪ್ ಮಹಾದು ಗವಿತ್ 49.48 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಮೂಲಕ ಚಿನ್ನದ ಪದಕ ಗೆದ್ದು, ಭಾರತದ 100ನೇ ಪದಕ ಸಾಧನೆಗೆ ಕಾರಣರಾದರು. ಭಾರತದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳು! ಅಪೂರ್ವ ಆನಂದದ ಕ್ಷಣ. ಈ ಯಶಸ್ಸು ನಮ್ಮ ಅಥ್ಲೀಟ್‌ಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಫಲವಾಗಿದೆ. ನಮ್ಮ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಇವರು ನೆನಪಿಸುತ್ತಾರೆ ಎಂದಿದ್ದಾರೆ.

ಈ ಮೊದಲು 2018ರಲ್ಲಿ ಜಕಾರ್ತದಲ್ಲಿ ನಡೆದಿದ್ದ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 72 ಪದಕ ಗೆದ್ದು ಸಾಧನೆ ಮಾಡಿತ್ತು. ಇದು ಈವರೆಗಿನ ಅತೀ ಹೆಚ್ಚು ಪದಕ ಗೆದ್ದ ಸಂಖ್ಯೆಯಾಗಿತ್ತು. ಆದರೆ ಈಗ ಈ ಪಟ್ಟಿ 100ಕ್ಕೆ ಏರಿದೆ. ಪ್ರಸ್ತುತ ಭಾರತ 29 ಚಿನ್ನ, 31 ಬೆಳ್ಳಿ ಹಾಗೂ 51 ಕಂಚಿನ ಪದಕ ಸೇರಿ ಒಟ್ಟು 111 ಪದಕ ಗೆದ್ದು ಕೊಂಡಿದೆ. ಈ ಮೂಲಕ ಪದಕ ವಿಜೇತರ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. ಒಟ್ಟು 521 ಪದಕಗಳೊಂದಿಗೆ ಚೀನಾ ಮೊದಲ ಸ್ಥಾನದಲ್ಲಿದೆ.

https://x.com/narendramodi/status/1718103347364843860?s=20

lokesh

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago