ಪ್ಯಾರಿಸ್: ಪ್ಯಾರಿಸ್ ಕ್ರೀಡಾಕೂಟದಲ್ಲಿ 2024ರಲ್ಲಿ ನಿರಾಶದಾಯಕ ಫಲಿತಾಂಶಗಳ ನಂತರ ಐದು ಬಾರಿಯ ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ ಅವರು ತಮ್ಮ ಒಲಿಂಪಿಕ್ಸ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಪ್ಯಾರಿಸ್ ಕ್ರೀಡಾಕೂಟದ ಮಹಿಳೆಯರ ಡಬಲ್ಸ್‌ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಕ್ರಾಸ್ಟೋ ಸತತ ಮೂರನೇ ಬಾರಿಗೆ ಸೋಲನ್ನು ಎದುರಿಸಬೇಕಾಯಿತು. ನಿನ್ನೆ ನಡೆದ ಸಿ ಗುಂಪಿನ ಅಂತಿಮ ಪಂದ್ಯದಲ್ಲಿ ಅಶ್ವಿನಿ ಮತ್ತು ತನಿಖಾ 15-21, 10-21ರಲ್ಲಿ ಆಸ್ಟ್ರೇಲಿಯಾದ ಸೆಟಿಯಾನಾ ಮಪಾಸಾ ಮತ್ತು ಏಂಜೆಲಾಯು ವಿರುದ್ಧ ಸೋಲು ಅನುಭವಿಸಬೇಕಾಯಿತು.
ಮೂರನೇ ಒಲಿಂಪಿಕ್ಸ್ ಆಡುತ್ತಿರುವ 34 ವರ್ಷದ ಅಶ್ವಿನಿ 2028ರ ಲಾಸ್ ಏಂಜನೀಸ್ ಗೇಮ್ಸ್‌ನಲ್ಲಿ ಆಡಲು ಬಯಸುತ್ತೀರಾ ಎಂದು ಕೇಳಿದಾಗ ಇದು ನನ್ನ ಕೊನೆಯ ಒಲಿಂಪಿಕ್ಸ್ ಆಗಿರುತ್ತದೆ. ಆದರೆ ತನಿಖಾ ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದ್ದಾರೆ.
ಈ ಸೋಲು ಭಾವನಾತ್ಮಕ ಮತ್ತು ಮಾನಸಿಕವಾಗಿ ತುಂಬಾ ಪ್ರಭಾವ ಬೀರಿದೆ. ಇಂತಹ ಪರಿಸ್ಥಿತಿಯನ್ನು ಮತ್ತೆ ನಾನು ಎದುರಿಸಲಾರೆ ಎಂದು ಅಶ್ವಿನಿ ಪೊನ್ನಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…