ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್‌ಗಳು ಚಿನ್ನದ ಬೇಟೆಯಾಡಿದ್ದಾರೆ. ಮಹಿಳಾ ವಿಭಾಗದಲ್ಲಿ ನೀತೂ ಗಂಗಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೇ, ದೇಶದ ನಂ.1 ಬಾಕ್ಸಿಂಗ್ ಪಟು ಅಮಿತ್ ಪಂಘಾಲ್ ಚೊಚ್ಚಲ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತದ ಪದಕದ ಬೇಟೆ ಭರ್ಜರಿಯಾಗಿಯೇ ಮುಂದುವರೆದಿದೆ.
21 ವರ್ಷದ ಹರ್ಯಾಣ ಮೂಲದ ಬಾಕ್ಸರ್ ನೀತೂ ಗಂಗಾ, ಮಹಿಳೆಯರ 48 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್‌ನ ಡೇಮಿ ಜೇಡ್ ರೆಸ್ಡಾನ್ ಎದುರು 5-0 ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.
ಇನ್ನು ಪುರುಷರ 51 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಅಮಿತ್ ಪಂಘಾಲ್ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಅಮಿತ್ ಪಂಘಾಲ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಗೆದ್ದ ಮೊದಲ ಚಿನ್ನದ ಪದಕ ಎನಿಸಿಕೊಂಡಿದೆ. ಈ ಮೊದಲು ಅಮಿತ್ 2018ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.
ಏಕಪಕ್ಷೀಯವಾಗಿ ನಡೆದ ಬಾಕ್ಸಿಂಗ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಬಾಕ್ಸರ್ ಕೀರನ್ ಮೆಕ್‌ಡೊನಾಲ್ಡ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪಾಲಾದ 15ನೇ ಚಿನ್ನದ ಪದಕ ಎನಿಸಿಕೊಂಡಿತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…