ಪಾಚೆಫ್‌ಸ್ಟ್ರೂಮ್: ಅಜೇಯ ಇಂಗ್ಲೆಂಡ್ ತಂಡದ ವಿರುದ್ಧ 7 ವಿಕೆಟ್‌ಗಳ ಸಾಧಿಸಿದ ಭಾರತದ ಮಹಿಳೆಯರು ಚೊಚ್ಚಲ ಅಂಡರ್-19 ಟಿ 20 ವಿಶ್ವಕಪ್ (U19 T20) ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಗೆಲ್ಲಲು 69 ರನ್‌ಗಳ ಗುರಿಯನ್ನು ಪಡೆದ ಭಾರತ 14 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 69 ರನ್ ಹೊಡೆಯುವ ಮೂಲಕ ವಿಶ್ವಕಪ್ ಗೆದ್ದುಕೊಂಡಿತು.
ಭಾರತದ ಪರ ಶಫಾಲಿ ವರ್ಮಾ 15 ರನ್, ಸೌಮ್ಯ ತಿವಾರಿ ಔಟಗದೇ 24 ರನ್, ಗೊಂಗಡಿ ತಿಷಾ 24 ರನ್ ಹೊಡೆದರು.
ಅತ್ಯುತ್ತಮ ಬೌಲಿಂಗ್ ಮಾಡಿದ ಭಾರತ 17.1 ಓವರ್‌ಗಳಲ್ಲಿ 68 ರನ್‌ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿತು. ಭಾರತದ ಪರ ಸಾಧು, ಅರ್ಚನಾ ದೇವಿ, ಪಾರ್ಶವಿ ಚೋಪ್ರಾ ತಲಾ ಎರಡು ವಿಕೆಟ್ ಪಡೆದರು.
ಗುಂಪು ಹಂತದ ಮೂರು ಪಂದ್ಯಗಳಲ್ಲಿ ಭಾರತ ಗೆದ್ದಿದ್ದರೆ ಕೇವಲ ಆಸ್ಟ್ರೇಲಿಯಾ ವಿರುದ್ಧ ಮಾತ್ರ ಸೋತಿತ್ತು. ಇಂಗ್ಲೆಂಡ್ ಎಲ್ಲಾ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿತ್ತು.
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…
ಮಂಗಳೂರು: ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…
ಟೆಹರಾನ್: ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ…
ಬೆಂಗಳೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…